ಅಥಣಿ: ‘ಮಕ್ಕಳಿಗೆ ಕೇವಲ ಹೆಚ್ಚು ಅಂಕಗಳಿಸುವ ಶಿಕ್ಷಣ ನೀಡಿದರೆ ಸಾಲದು, ಅವರಿಗೆ ಒಳ್ಳೆಯ ಸಂಸ್ಕಾರ ಮಾನವೀಯ ಮೌಲ್ಯಗಳನ್ನು ಕಲಿಸುವುದರ ಜೊತೆಗೆ ಅವರಲ್ಲಿರುವ ಕೌಶಲ ಗುರುತಿಸಿ ಪ್ರೋತ್ಸಾಹಿಸಿದಾಗ ಸಾಧಕರಾಗಿ ಹೊರಹೊಮ್ಮಲು ಸಾಧ್ಯ’ ಎಂದು ಐಪಿಎಸ್ ಅಧಿಕಾರಿ ರವೀಂದ್ರ ಗಡಾದೆ ಹೇಳಿದರು.

ಇಲ್ಲಿನ ಶಿವಣಗಿ ಸಾಂಸ್ಕೃತಿಕ ಭವನದಲ್ಲಿ ಚಲವಾದಿ (ಬಲಗೈ) ಸಮುದಾಯ ನೌಕರರ ಸಂಘದಿಂದ ಗುರುವಾರ ಹಮ್ಮಿಕೊಂಡಿದ್ದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ದ್ವಿತೀಯ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶೇ 80ಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

‘ವಿದ್ಯಾರ್ಥಿಗಳು ಮುಖ್ಯವಾಗಿ ಅಂಕಗಳ ಜೊತೆಗೆ ಜ್ಞಾನ, ಸಂಸ್ಕಾರ ಮತ್ತು ಸಮಾಜದ ಬಗ್ಗೆ ಕಾಳಜಿ ಬೆಳೆಸಿಕೊಳ್ಳಬೇಕು’ ಎಂದರು.

ಬೆಂಗಳೂರಿನ ಅಕ್ಕ ಐಎಎಸ್ ಅಕಾಡೆಮಿ ನಿರ್ದೇಶಕ ಶಿವಕುಮಾರ ಮಾತನಾಡಿದರು. ಚಲವಾದಿ ಸಮುದಾಯದ ನೌಕರ ಸಂಘದ ಅಧ್ಯಕ್ಷ ಮಹಾಲಿಂಗ ಮೇತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶೇ 80ಕ್ಕಿಂತ ಅಧಿಕ ಅಂಕ ಪಡೆದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಸತ್ಕರಿಸಿದರು.

ಬಂತೇಜೀ ಪ್ರಜ್ಞಾಭೋಧಿ ಥೆರೋ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ವಿಲಾಸ ಕಾಂಬಳೆ, ಚಲವಾದಿ ಸಮುದಾಯ ನೌಕರರ ಸಂಘದ ಕಾರ್ಯದರ್ಶಿ ಮಹಾಂತೇಶ ಕಾಂಬಳೆ, ಅಪ್ಪಾಸಾಬ ಸೂರ್ಯವಂಶಿ, ಖಜಾಂಚಿ ನಾಗರಾಜ ಕಾಂಬಳೆ, ಸದಸ್ಯರಾದ ಭರತ ಕಾಂಬಳೆ, ಶಿವಾನಂದ ಮೇಲ್ಗಡೆ, ಸಂಜಯ ಸಾಗರ, ಮಲ್ಲೇಶ ಗೊಂದಳೆ, ಉಮೇಶ ಪಾಂಗಿ, ಅಜೀತ ಕುಟಗೊಳಿ, ಕುಮಾರ ಸತ್ತಿಕರ,ವಿಜಯ ಕನಾಳ ಇದ್ದರು. ಮಹಾಲಿಂಗ ಮೇತ್ರಿ ಸ್ವಾಗತಿಸಿದರು. ಶಿವಾನಂದ ಮೇಲ್ಗಡೆ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-21-188493700

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.