ಔರಾದ್: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಔರಾದ್ ತಾಲ್ಲೂಕಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಸಂತಸ ತಂದಿದೆ ಎಂದು ತಹಶೀಲ್ದಾರ್ ಮಹೇಶ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.

ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಟಾಪರ್ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಾಧನೆಗೆ ಬಡತನ, ಮಾಧ್ಯಮ ಅಡ್ಡಿ ಬರುವುದಿಲ್ಲ. ತಾಲ್ಲೂಕಿನ ಐವರು ಟಾಪರ್ ಗ್ರಾಮೀಣ ಭಾಗದ ಕನ್ನಡ ಶಾಲೆ ಮಕ್ಕಳು ಎಂಬುದನ್ನು ಹೆಮ್ಮೆ ವಿಷಯ’ ಎಂದರು.

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ ರಾಠೋಡ ಮಾತನಾಡಿ, ‘ಕಳೆದ ಬಾರಿ ನಮ್ಮ ತಾಲ್ಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ಶೇ 52 ಇದ್ದದ್ದು ಈ ಬಾರಿ ಶೇ 93.92 ಆಗಿದೆ. ಜಿಲ್ಲೆಯಲ್ಲಿ 2ನೇ ಸ್ಥಾನದಲ್ಲಿದ್ದೇವೆ’ ಎಂದರು.

ತಾಲ್ಲೂಕು ಪಂಚಾಯಿತಿ ಇಒ ಕಿರಣ ಪಾಟೀಲ ಮಾತನಾಡಿ, ‘ಈ ವರ್ಷ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಕಾಳಜಿ ವಹಿಸಿದ ಕಾರಣ ಫಲಿತಾಂಶ ವೃದ್ಧಿಸಿದೆ. ತಾಲ್ಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು ಸಹ ಶಾಲೆಗಳಿಗೆ ಭೇಟಿ ನೀಡಿ ಸೂಕ್ತ ಸಲಹೆ ಹಾಗೂ ಪ್ರೇರಣೆ ನೀಡಿದ್ದಾರೆ’ ಎಂದರು.

ತಾಲ್ಲೂಕಿನ ಟಾಪರ್ ಸಂತಪೂರ ಗುರುಕುಲ ಶಾಲೆಯ ತಾಂಬ್ರಗೌರಿ ಸೋಮನಾಥ (ಶೇ 94.4), ಇದೇ ಶಾಲೆಯ ವೈಷ್ಣವಿ ಶೇ 98.88) ಹಾಗೂ ಚನ್ನಬಸವ ಪಟ್ಟದ್ದೇವರು ಪ್ರೌಢಶಾಲೆ ಕಮಲನಗರದ ಅಮೃತಾ (ಶೇ 98.88) ಹಾಗೂ ಸಂತಪೂರ ಜ್ಞಾನ ಭಾರತಿ ಶಾಲೆಯ ಪುಷ್ಪಲತಾ (ಶೇ 98.72) ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸಿಆರ್ಪಿ ಜ್ಯೋತಿ, ಶಿವಕುಮಾರ ಹೊನ್ನಾಳೆ, ಮುಖ್ಯ ಶಿಕ್ಷಕ ಶಿವಕುಮಾರ ಹಿರೇಮಠ ಪಾಲಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-33-2038780283

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.