ಔರಾದ್: ಈ ವರ್ಷ ತಾಲ್ಲೂಕಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ವೃದ್ಧಿಯಾಗಿದ್ದು, ಶೇ 92.92 ಫಲಿತಾಂಶ ಬಂದಿದೆ. ಒಟ್ಟು ಪರೀಕ್ಷೆಗೆ ಎದುರಿಸಿದ 2882 ವಿದ್ಯಾರ್ಥಿಗಳ ಪೈಕಿ 2676 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಳೆದ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಶೇ 56 ಪ್ರತಿಶತ ಫಲಿತಾಂಶ ಬಂದಿತ್ತು. ಈ ಬಾರಿ ಶೇ 92.92 ಸಾಧನೆ ಮಾಡಿ ಜಿಲ್ಲೆಯಲ್ಲಿ 2ನೇ ಸ್ಥಾನದಲ್ಲಿದ್ದೇವೆ ಎಂದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ ರಾಠೋಡ್ ತಿಳಿಸಿದ್ದಾರೆ.

ತಾಲ್ಲೂಕಿಗೆ ದಿವ್ಯ, ತಾಂಬ್ರಗೌರಿ ಪ್ರಥಮ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಂತಪೂರ ಜ್ಞಾನಭಾರತಿ ಪ್ರೌಢಶಾಲೆಯ ದಿವ್ಯ ಮಲ್ಲಪ್ಪಗೌಡ ಹಾಗೂ ಸಂತಪೂರ ಅನುಭವ ಮಂಟಪ ಗುರುಕುಲ ಶಾಲೆಯ ತಾಂಬ್ರಗೌರಿ ಸೋಮನಾಥ ತಲಾ 619 (ಶೇ 99.4) ಅಂಕ ಪಡೆದು ತಾಲ್ಲೂಕಿಗೆ ಪ್ರಥಮ ಸ್ಥಾನ ಹಂಚಿಕೊಂಡಿದ್ದಾರೆ.

ಸಂತಪೂರ ಅನುಭವ ಮಂಪಟ ಗುರುಕುಲ ಶಾಲೆಯ ವೈಷ್ಣವಿ ಹಾಗೂ ಕಮಲನಗರ ಚನ್ನಬಸವ ಪಟ್ಟದ್ದೇವರು ಪ್ರೌಢಶಾಲೆಯ ಅಮೃತಾ 618 (ಶೇ 98.88) ಅಂಕ ಪಡೆದು ತಾಲ್ಲೂಕಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದ ಪತ್ರಕರ್ತ ಮಲ್ಲಪ್ಪಗೌಡ ಅವರ ಮಗಳು ದಿವ್ಯ ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾಳೆ. ವಿದ್ಯಾರ್ಥಿನಿ ತಾಯಿ ಅಂಗನವಾಡಿ ಶಿಕ್ಷಕಿಯಾಗಿದ್ದು, ಮಗಳ ಸಾಧನೆಗೆ ಹಮ್ಮೆ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿ ತಾಂಬ್ರಗೌರಿ ಸೋಮನಾಥ ಗ್ರಾಮೀಣ ಭಾಗದ ಕೃಷಿ ಕುಟಂಬದಿಂದ ಬಂದಿದ್ದು, ಇಬ್ಬರು ಕನ್ನಡ ಮಾಧ್ಯಮದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

36 ವಿದ್ಯಾರ್ಥಿಗಳು ಅಗ್ರಶ್ರೇಣಿ: ತಾಲ್ಲೂಕಿನ ಸಂತಪೂರ ಅನುಭವ ಮಂಟಪ ಗುರುಕುಲ ಕನ್ನಡ ಮಾಧ್ಯಮ ಶಾಲೆಯ 36 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿ ಸಾಧನೆ ಮಾಡಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ 57 ವಿದ್ಯಾರ್ಥಿಗಳ ಪೈಕಿ 36 ಅಗ್ರಶ್ರೇಣಿ, 21 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ತಾಮ್ರಗೌರಿ ಶೇ 99.04, ವೈಷ್ಣವಿ ಸಿದ್ದಪ್ಪ ಶೇ 98.88, ಶ್ರಾವಣಿ ಶಿವರಾಜ ಶೇ 98.24 ಅಂಕ ಪಡೆದು ಸಾಧನೆ ಮಾಡಿದ್ದಾರೆ ಎಂದು ಮುಖ್ಯ ಶಿಕ್ಷಕ ಶಿವಕುಮಾರ ಹಿರೇಮಠ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಭಾಲ್ಕಿ ಮಠದ ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು, ಸಂಜುಕುಮಾರ ಜುಮ್ಮಾ ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-33-1420043977

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.