ಔರಾದ್: ‘ಗಡಿಭಾಗದ ಗ್ರಾಮೀಣ ಪ್ರದೇಶದಲ್ಲಿಯೂ ವಿದ್ಯಾರ್ಥಿಗಳು ಅದ್ಭುತ ಪ್ರತಿಭೆ ಮೆರೆದಿದ್ದು, ಅವರಿಗೆ ಸರಿಯಾದ ಶಿಕ್ಷಣ, ಸಂಸ್ಕಾರ ಮತ್ತು ಮಾರ್ಗದರ್ಶನ ದೊರೆತರೆ ರಾಜ್ಯ ಮಟ್ಟದ ಸಾಧನೆ ಸಾಧ್ಯವಾಗುತ್ತದೆ’ ಎಂದು ತಹಶೀಲ್ದಾರ್ ಮಹೇಶ ಪಾಟೀಲ ಹೇಳಿದರು.

ತಾಲ್ಲೂಕಿನ ಸಂತಪುರ ಅನುಭವ ಮಂಟಪದಲ್ಲಿ ಈಚೆಗೆ ನಡೆದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.

‘ಭಾಲ್ಕಿ ಪಟ್ಟದೇವರು ಗಡಿಭಾಗದಲ್ಲಿ ಶಾಲೆ ಮತ್ತು ಕಾಲೇಜುಗಳನ್ನು ಆರಂಭಿಸಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದ ಜೊತೆಗೆ ಸಂಸ್ಕಾರಯುತ ಶಿಕ್ಷಣ ನೀಡುವ ಮೂಲಕ ಶೈಕ್ಷಣಿಕ ಕ್ರಾಂತಿ ನಡೆಸುತ್ತಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

‘ಸಂತಪುರ ಸಿದ್ದರಾಮೇಶ್ವರ ಕಾಲೇಜು ಜಿಲ್ಲೆ ಹಾಗೂ ತಾಲ್ಲೂಕಿನಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ. ಕಳೆದ 8 ವರ್ಷಗಳಿಂದ ಶೇ.100 ಫಲಿತಾಂಶ ದಾಖಲಿಸುತ್ತಿರುವುದು ಸಂಸ್ಥೆಯ ಶೈಕ್ಷಣಿಕ ಬದ್ಧತೆಯನ್ನು ತೋರಿಸುತ್ತದೆ. ಅನುಭವ ಮಂಟಪ ಗುರುಕುಲ ಪ್ರೌಢಶಾಲೆಯೂ ತಾಲ್ಲೂಕಿನಲ್ಲಿ ಪ್ರಥಮ ಸ್ಥಾನ ಪಡೆದು 16 ವರ್ಷಗಳಿಂದ ಶೇ.100 ಫಲಿತಾಂಶ ಸಾಧಿಸಿರುವುದು ವಿಶೇಷ’ ಎಂದು ಹೇಳಿದರು.

ಸಾನ್ನಿಧ್ಯ ವಹಿಸಿದ ಗುರುಬಸವ ಪಟ್ಟದೇವರು ಮಾತನಾಡಿ, ‘ಪ್ರತಿಯೊಬ್ಬರೂ ಸುಖ, ಶಾಂತಿ ಮತ್ತು ನೆಮ್ಮದಿ ಪಡೆಯಬೇಕಾದರೆ ಸತ್ಸಂಗದ ಮಾರ್ಗದಲ್ಲಿ ನಡೆಯಬೇಕು. ಜ್ಞಾನಕ್ಕೆ ಇಡೀ ಜಗತ್ತೇ ತಲೆಬಾಗುತ್ತದೆ. ವಿದ್ಯಾರ್ಥಿಗಳು ಜ್ಞಾನದ ರತ್ನಗಳಾಗಿ ಸಮಾಜಕ್ಕೆ ಮಾದರಿಯಾಗಬೇಕು’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ರತಿಕಾಂತ ಸ್ವಾಮಿ ಮಾತನಾಡಿದರು. ಸಂಜೀವಕುಮಾರ ಜುಮ್ಮಾ, ಹೈದರಾಬಾದ್ನ ರಾಜಕುಮಾರ ಮಾಳಗೆ, ಅಭಿಷೇಕ ಸ್ವಾಮಿ, ಬಸವರಾಜ ಬಿರಾದಾರ ಉಪಸ್ಥಿತರಿದ್ದರು.

ಪ್ರಾಂಶುಪಾಲ ನವೀಲಕುಮಾರ ಉತ್ಕಾರ ಸ್ವಾಗತಿಸಿದರು. ಮುಖ್ಯಶಿಕ್ಷಕ ಶಿವಕುಮಾರ ಹಿರೇಮಠ ವಂದಿಸಿದರು. ಸಂಗಮೇಶ ಬ್ಯಾಳೆ ಕಾರ್ಯಕ್ರಮ ನಿರೂಪಿಸಿದರು. ಹಾವಗಿರಾವ ಶೆಂಬೆಳ್ಳಿ ಹಾಗೂ ಗೋವಿಂದರೆಡ್ಡಿ ವಚನ ಸಂಗೀತ ನಡೆಸಿಕೊಟ್ಟರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-33-1369401548

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.