ಬಾಗೇಪಲ್ಲಿ: 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರಲ್ಲಿ ಬಾಗೇಪಲ್ಲಿ ಪಟ್ಟಣದ ಹೊರವಲಯದ ಪ್ರಗತಿ ವಿದ್ಯಾ ಸಂಸ್ಥೆ ವಿದ್ಯಾರ್ಥಿನಿ ಪ್ರಗತಿ ಅನುತ್ತೀರ್ಣಳಾಗಿದ್ದಳು. ಆದರೆ, ಮರು ಮೌಲ್ಯಮಾಪನದಲ್ಲಿ ಪ್ರಥಮ ಶ್ರೇಣಿ ಅಂಕ ಪಡೆದಿದ್ದಾಳೆ.

ತಪ್ಪಾದ ಮೌಲ್ಯಮಾಪನದಿಂದ ವಿದ್ಯಾರ್ಥಿನಿ ಮತ್ತು ಪೋಷಕರು ಆತಂಕಕ್ಕೊಳಗಾದ ಬಗ್ಗೆ ಸಂಸ್ಥೆ ಪ್ರಾಂಶುಪಾಲ ಆರ್ಯನ್ ಮಿರ್ಜಾ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದ್ದರು.

ನಂತರ ಮಾತನಾಡಿ, ‘ನಮ್ಮ ಶಾಲೆ ವಿದ್ಯಾರ್ಥಿನಿ ಪ್ರಗತಿ ಪರೀಕ್ಷೆ-1ರಲ್ಲಿ 405 ಅಂಕ ಪಡೆದಿದ್ದರೂ ಅನುತ್ತೀರ್ಣಳು ಎಂದು ಫಲಿತಾಂಶ ಪ್ರಕಟವಾಗಿತ್ತು. ವರ್ಷ ಪೂರ್ತಿ ಶ್ರಮಿಸಿ ಬರೆದ ಪರೀಕ್ಷೆಗೆ ಮೌಲ್ಯಮಾಪಕರ ನಿರ್ಲಕ್ಷ್ಯದಿಂದ ಈ ಫಲಿತಾಂಶ ಬಂದಿದೆ. ಇದರಿಂದ ವಿದ್ಯಾರ್ಥಿನಿ ಮಾನಸಿಕವಾಗಿ ಕುಗ್ಗಿದ್ದಾಳೆ. ಮೌಲ್ಯಮಾಪಕರ ನಿರ್ಲಕ್ಷ್ಯಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ಅನುತ್ತೀರ್ಣಳಾದ ವಿದ್ಯಾರ್ಥಿನಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದು, ಅದರಲ್ಲಿ 409 ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣಳಾಗಿದ್ದಾಳೆ. ನಿರ್ಲಕ್ಷ್ಯವಾಗಿ ಮೌಲ್ಯಮಾಪನ ಮಾಡಿದವರ ವಿರುದ್ಧ ಎಸ್ಸೆಸ್ಸೆಲ್ಸಿ ಬೋರ್ಡ್ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-16-1815180926

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.