ಬಸವಕಲ್ಯಾಣ: ಅಖಿಲ ಕರ್ನಾಟಕ ಹೂಗಾರ ಮಹಾಸಭಾ ಜಿಲ್ಲಾ ಘಟಕದಿಂದ ಭಾನುವಾರ ನಗರದಲ್ಲಿ ಸಭೆ ಆಯೋಜಿಸಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲು ನಿರ್ಧರಿಸಲಾಯಿತು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ ಹೂಗಾರ ಮದಕಟ್ಟಿ ಮಾತನಾಡಿ, ‘ಸಮಾಜದ ಏಳ್ಗೆಗಾಗಿ ವಿವಿಧ ರಚನಾತ್ಮಕ ಕಾರ್ಯಗಳನ್ನು ಕೈಗೊಳ್ಳಬೇಕಾಗಿದೆ’ ಎಂದರು.

ಸಂಘದ ರಾಜ್ಯ ಸಹ ಕಾರ್ಯದರ್ಶಿ ದುರ್ಯೋಧನ ಹೂಗಾರ ಮಾತನಾಡಿ, ‘ಎಲ್ಲರೂ ಒಗ್ಗಟ್ಟಿನಿಂದ ಇದ್ದು ಎಲ್ಲ ಕಾರ್ಯಕ್ಕೂ ಸಹಕಾರ ನೀಡಬೇಕು’ ಎಂದರು.

ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿಠಲ್ ಹೂಗಾರ, ಜಿಲ್ಲಾ ಉಪಾಧ್ಯಕ್ಷ ಶಿವಪುತ್ರಪ್ಪ ಹೂಗಾರ, ರಾಜೇಂದ್ರ ಹೂಗಾರ, ಲಕ್ಷ್ಮಿಬಾಯಿ ಪಾಟೀಲ, ವಕೀಲರಾದ ವಿಜಯಲಕ್ಷ್ಮಿ ಹೂಗಾರ, ರೇಖಾ, ರೇಷ್ಮಾ, ಹಣಮಂತ ಹೂಗಾರ, ರವಿ ಹೂಗಾರ ಉಪಸ್ಥಿತರಿದ್ದರು.

ಆಹ್ವಾನ: ಬೀದರ್ ಜಿಲ್ಲೆಯಲ್ಲಿನ ಹೂಗಾರ ಸಮಾಜದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ 60ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 1 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಅಂಕ ಪಟ್ಟಿಯ ನಕಲುಪ್ರತಿ ಹಾಗೂ ಒಂದು ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ 9449726950, 8150017465 ಸಂಪರ್ಕಿಸಲು ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-33-1145453253

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.