ತರೀಕೆರೆ: ತಾಲ್ಲೂಕಿನ ಬಾವಿಕೆರೆಯಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ದಲ್ಲಿ ಶೇ 100 ಫಲಿತಾಂಶ ದಾಖಲಾಗಿದೆ.

ಪ್ರಸ್ತುತ ಸಾಲಿನಲ್ಲಿ ಆಂಗ್ಲ ಮಾಧ್ಯಮದಲ್ಲಿ 29 ಹಾಗೂ ಕನ್ನಡ ಮಾದ್ಯಮದಲ್ಲಿ 15 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು.ಫಲಿತಾಂಶ ಪ್ರಕಟವಾದಾಗ ಒಬ್ಬ ವಿದ್ಯಾರ್ಥಿ ಒಂದು ವಿಷಯದಲ್ಲಿ ಅನುತ್ತೀರ್ಣಗೊಂಡಿದ್ದ. ಆ ವಿದ್ಯಾರ್ಥಿಯ ಉತ್ತರ ಪ್ರತಿಕೆಯನ್ನು ಮರುಮೌಲ್ಯಮಾಪನಕ್ಕೆ ಒಳಪಡಿಸಿದಾಗ ವಿದ್ಯಾರ್ಥಿ ಉತ್ತೀರ್ಣನಾಗಿದ್ದು, ಫಲಿತಾಂಶ ಶೇ 100 ಬಂದಿದೆ.

ಇಂಗ್ಲಿಷ್ ಮಾಧ್ಯಮದಲ್ಲಿ ಸಿಂಧೂಶ್ರೀ 566, ಚೇತನ್ 561 ಮತ್ತು ಕುಸುಮ 549 ಅಂಕಗಳನ್ನು ಪಡೆದು ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ. ಅತ್ಯುನ್ನತ 5, ಪ್ರಥಮ 22, ದ್ವಿತೀಯ 13, ತೃತೀಯ ಶ್ರೇಣಿಯಲ್ಲಿ 4 ಮಕ್ಕಳು ಉತ್ತೀರ್ಣರಾಗಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-126-1254116106

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.