ಬೆಳಗಾವಿ: 2025–26ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ಶೇ 85ಕ್ಕಿಂತ ಅಧಿಕ ಅಂಕ ಪಡೆದ ಹಡಪದ ಸಮಾಜದ ವಿದ್ಯಾರ್ಥಿಗಳಿಗೆ ನಗರದಲ್ಲಿ ಈಚೆಗೆ, ಕರ್ನಾಟಕ ರಾಜ್ಯ ಹಡಪದ ನೌಕರರ ಸಂಘ ಹಾಗೂ ಜಿಲ್ಲಾ ಘಟಕದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲಾಯಿತು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಬಿ.ಎಸ್. ನಾವಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕುಮಾರ ನಾವಿ, ಲೋಕಾಯುಕ್ತ ಸಿಪಿಐ ಗುರುರಾಜ ಮೈಲಾರಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು.

ಕುಮಾರ್ ನಾವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಮಾರು 80ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಸತ್ಕರಿಸಿ ಪ್ರೋತ್ಸಾಹ ಧನ ನೀಡಲಾಯಿತು. ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ 30 ನೌಕರರಿಗೆ, ಬಡ್ತಿ ಪಡೆದವರಿಗೆ, ಹೊಸ ನೇಮಕಾತಿ ಹೊಂದಿದವರಿಗೆ ಮತ್ತು ವಿಶೇಷ ಸಾಧಕ ಪ್ರಶಸ್ತಿಗಳನ್ನು ಪಡೆದವರನ್ನೂ ಸನ್ಮಾನಿಸಲಾಯಿತು.

ಉಪಾಧ್ಯಕ್ಷ ಸುರೇಶ ನಾವಲಗಿ, ಶಿವಪುತ್ರಪ್ಪ ಹುಕ್ಕೇರಿ, ಮಹದೇವ ಹೊನ್ನಮಾನೆ, ಅಶೋಕ ಹೊನ್ನಮಾನೆ, ಎಸ್.ಜಿ ಮಮದಾಪೂರ, ಮನೋಹರ ಕೋರೆ, ಧನಂಜಯ ಹೊಂಗಲ್, ಮಲ್ಲಿಕಾರ್ಜುನ, ವೀರಭದ್ರ ಎರನಾಳ, ಶ್ರೀಶೈಲ್ ಹಡಪದ, ಷಣ್ಮುಖ ನಾವಿ, ಶಿವಾನಂದ ನಾವಿ ಹಲವರು ಪಾಲ್ಗೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-21-1893621635

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.