ಬೆಟ್ಟದಪುರ: ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಶಿಸ್ತು ಹಾಗೂ ನಡವಳಿಕೆಗೆ ಹೆಚ್ಚಿನ ಮಹತ್ವ ನೀಡುತ್ತಿರುವ ಕಾರಣದಿಂದಲೇ ಪೋಷಕರು ತಮ್ಮ ಮಕ್ಕಳನ್ನು ಎಸ್.ಎಂ.ಎಸ್. ವಿದ್ಯಾ ಸಂಸ್ಥೆಗೆ ಸೇರಿಸಲು ಆಸಕ್ತಿ ತೋರಿಸುತ್ತಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರವಿಪ್ರಸನ್ನ ತಿಳಿಸಿದರು.

ಗ್ರಾಮದ ಎಸ್.ಎಂ.ಎಸ್ ವಿದ್ಯಾಸಂಸ್ಥೆಯಲ್ಲಿ ಗುರುವಾರ ಆಯೋಜಿಸಿದ್ದ ಎಸ್ಎಸ್ಎಲ್ಸಿ - ಪಿಯುಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಬಿ.ವಿ.ಮಂಜುನಾಥ್ ಮಾತನಾಡಿ, ಸಮಾಜದಲ್ಲಿ ಗೌರವದಿಂದ ಗುರುತಿಸಿಕೊಳ್ಳುವ ಮೌಲ್ಯಯುತ ಬದುಕನ್ನು ಕಟ್ಟಿಕೊಡುವ ಶಕ್ತಿ ಶಿಕ್ಷಣದಲ್ಲಿದೆ. ನಮ್ಮ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳು ಇಂದು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮಾಜದಲ್ಲಿ ಮಾದರಿಯಾಗಿರುವುದು ಸಂಸ್ಥೆಗೆ ಅಪಾರ ಗೌರವ ಮತ್ತು ಹಿರಿಮೆಯನ್ನು ತಂದಿದೆ ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪೂಜಾ, ಮಾತನಾಡಿ ವಿದ್ಯಾರ್ಥಿನಿಯರು ಜೀವನಕ್ಕೆ ಅಗತ್ಯವಾಗುವ ಆಹಾರ, ಉಡುಪು ಸೇರಿದಂತೆ ದಿನನಿತ್ಯದ ಅವಶ್ಯಕ ವಸ್ತುಗಳನ್ನು ಸ್ವಂತ ಪರಿಶ್ರಮದಿಂದ ಸಂಪಾದಿಸಿ ಪಡೆದುಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ಹೇಳಿದರು.

ಲೋಕೋಪಯೋಗಿ ಇಲಾಖೆ ಎಇಇ ಯೋಗಾನಂದ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ಡಿ.ಮಂಜುನಾಥ್ ಮಾತನಾಡಿದರು. ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಸಂಸ್ಥೆಯ ಕಾರ್ಯದರ್ಶಿ ಎ.ವಿ ಛಾಯಾ, ಇಶಾ ಫೌಂಡೇಶನ್ ಸ್ವಯಂ ಸೇವಕಿ ಸುಜಾತ, ಪ್ರಾಂಶುಪಾಲ ರಾಜು, ಮುಖ್ಯಶಿಕ್ಷಕ ಎಸ್. ಆರ್.ವೆಂಕಟೇಶ್, ಕುಮಾರ್, ಉಪನ್ಯಾಸಕ ಸತೀಶ್, ಯಶವಂತ್, ಕುಬೇರ್, ಶಿವಕುಮಾರ್, ರಾಮೇಗೌಡ, ಬಸವರಾಜು, ಹರ್ಷಿತಾ, ಸುನಿಲ್, ಪ್ರತಾಪ್, ವಸಂತ್, ಶಿಕ್ಷಕ ಅಂದಾನಯ್ಯ, ಸುನಿಲ್, ರೂಪಾ, ಅಭಿಲಾಶ್, ಎಸ್.ಬಿ.ಸತೀಶ್, ಶಿವಕುಮಾರ್, ಸಿಬ್ಬಂದಿ ಮತ್ತು ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-38-2064578571

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.