ಭಾಲ್ಕಿ: ತಾಲ್ಲೂಕಿನ ನಿಟ್ಟೂರ (ಬಿ) ಗ್ರಾಮದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಎಸ್ಎಸ್ಎಲ್ಸಿಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯ ಗೌತಮ ಸೋಮವಂಶಿ ತಿಳಿಸಿದ್ದಾರೆ.

ಐಶ್ವರ್ಯ ರವೀಂದ್ರ, ಸೌಮ್ಯ ಯಶಪ್ಪ ಶೇ 91.2 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಆರು ವಿದ್ಯಾರ್ಥಿನಿಯರು ಹಿಂದಿ ವಿಷಯದಲ್ಲಿ 100ಕ್ಕೆ 100 ಅಂಕ ಗಳಿಸಿದ್ದಾರೆ. ಪರೀಕ್ಷೆ ಬರೆದ 42 ವಿದ್ಯಾರ್ಥಿನಿಯರ ಪೈಕಿ 13 ವಿದ್ಯಾರ್ಥಿಯರು ಅಗ್ರ ಶ್ರೇಣಿಯಲ್ಲಿ, 25 ವಿದ್ಯಾರ್ಥಿನಿಯರು ಪ್ರಥಮ ದರ್ಜೆ, ಇಬ್ಬರು ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದು, ಶಾಲೆಯ ಒಟ್ಟು ಫಲಿತಾಂಶ ಶೇ.100 ರಷ್ಟು ಆಗಿದೆ. ವಿದ್ಯಾರ್ಥಿನಿಯರ ಸಾಧನೆಗೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಯೋಗೀಶ ಎಸ್. ಬಿ., ಜಿಲ್ಲಾ ಸಮನ್ವಯಾಧಿಕಾರಿ ಶರಣಪ್ಪ ಬಿರಾದರ, ಪ್ರಾಚಾರ್ಯ ಗೌತಮ ಸೋಮವಂಶಿ, ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-33-1889475001

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.