ಭಾಲ್ಕಿ: ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ 2026ರ ಎಸ್ಎಸ್ಎಲ್ಸಿ ಹಿಂದಿ ಮುಖ್ಯ ಪರೀಕ್ಷೆಯ ವಿಷಯದ ಅಂಕಗಳನ್ನು ಯಥಾವತ್ತಾಗಿ ಮುಂದುವರೆಸಲು ಆಗ್ರಹಿಸಿ ರಾಜ್ಯ ಪ್ರೌಢ ಶಾಲಾ ಶಿಕ್ಷಕರ ಸಂಘದ ವತಿಯಿಂದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಬರೆದ ಮನವಿ ಪತ್ರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು, ‘ಈಚೆಗೆ 2026ರ ಎಸ್ಎಸ್ಎಲ್ಸಿ ಹಿಂದಿ ಮುಖ್ಯ ಪರೀಕ್ಷೆಯ ವಿಷಯದ ಅಂಕಗಳನ್ನು ಕೇವಲ ಗ್ರೇಡಿಂಗ್ಗಳಿಗಾಗಿ ಮಾತ್ರ ಪರಿಗಣಿಸಲಾಗುತ್ತದೆ ಎಂದು ಆದೇಶಿಸಿದ್ದು ಅವೈಜ್ಞಾನಿಕವಾಗಿದೆ. ಇದರಿಂದ ಹಿಂದಿ ವಿಷಯ ಬೋಧನೆ ಮಾಡುವ ಶಿಕ್ಷಕರ ವೃತ್ತಿ ಬದುಕು ಬೀದಿ ಪಾಲಾಗುತ್ತದೆ. ವರ್ಷವಿಡೀ ಹಿಂದಿ ವಿಷಯ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ಘೋರ ಅನ್ಯಾಯ ಮಾಡಿದಂತಾಗುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಹಿಂದಿ ಕೇವಲ ಒಂದು ವಿಷಯವಲ್ಲ. ಅದು ರಾಷ್ಟ್ರದ ವಿವಿಧ ರಾಜ್ಯಗಳ ಜನರ ನಡುವೆ ಸಂಪರ್ಕ ಸಾಧಿಸುವ ಪ್ರಮುಖ ಭಾಷೆಯಾಗಿದೆ. ದಕ್ಷಿಣ ಭಾರತದ ಅನೇಕ ರಾಜ್ಯಗಳಲ್ಲಿ ಬಹುಸಂಖ್ಯಾತ ಜನರ ವ್ಯವಹಾರಿಕ ಭಾಷೆ ಹಿಂದಿಯಾಗಿದೆ. ಹೀಗಾಗಿ, ಈ ಹಿಂದೆ ಶಿಕ್ಷಣ ಇಲಾಖೆಯಲ್ಲಿದ್ದ ತ್ರಿಭಾಷಾ ಸೂತ್ರವನ್ನು ಯಥಾವತ್ತಾಗಿ ಮುಂದುವರೆಸಿ ವಿದ್ಯಾರ್ಥಿ, ಶಿಕ್ಷಕರಿಗೆ ನ್ಯಾಯ ದೊರಕಿಸಿ ಕೊಡಬೇಕು’ ಎಂದು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ದತ್ತಾತ್ರಿ ಕಾಟ್ಕರ್, ದೀಲಿಪ ಬಿರಾದಾರ, ಹಣಮಂತ ಕಾರಾಮುಂಗೆ, ನಂದಕುಮಾರ ಜಾಧವ, ಅನಿಲ್ ಮಾಟೆ, ಬಸಿರುದ್ದೀನ್, ಸಂಜೀವ್ ಉಪಾಸೆ, ಕಿಶೋರ, ಆಶಾ ರಾಥೋಡ್, ಸ್ವರೂಪ ರಾಣಿ, ಕಾಳಿದಾಸ ಶಿಂಧೆ, ವೈಭವ ಪಾಂಡ್ರೆ, ಶ್ರೀಮಂತ ಸೇರಿದಂತೆ ಇತರರು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-33-594617731

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.