ಬೀದರ್: 2025-26ನೇ ಶೈಕ್ಷಣಿಕ ವರ್ಷದಿಂದಲೇ ಎಸ್ಎಸ್ಎಲ್ಸಿ ಅಂಕಗಳ ಪಟ್ಟಿಯಿಂದ ಹಿಂದಿ ವಿಷಯ ಹೊರಗಿಡುವುದಾಗಿ ರಾಜ್ಯ ಸರ್ಕಾರ ಘೋಷಿಸಿರುವುದನ್ನು ಅಖಿಲ ಕರ್ನಾಟಕ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದ ರಾಜ್ಯ ಅಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಖಂಡಿಸಿದ್ದಾರೆ.

‘ಸರ್ಕಾರದ ಕ್ರಮ ವಿವೇಚನಾ ರಹಿತ ಹಾಗೂ ಅವೈಜ್ಞಾನಿಕವಾದದ್ದು. ಅವಸರದಲ್ಲಿ ಕೈಗೊಂಡ ಈ ಕ್ರಮ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಉಂಟು ಮಾಡಲಿದೆ’ ಎಂದು ಶನಿವಾರ ಪ್ರಕಟಣೆಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

‘ಮಂಗಳವಾರ (ಮಾ.31) ನಡೆಯಲಿರುವ ಎಸ್ಎಸ್ಎಲ್ಸಿಯ ಹಿಂದಿ ವಿಷಯದ ಪರೀಕ್ಷೆಗೆ ವಿದ್ಯಾರ್ಥಿಗಳು ಬಹಳ ಕಷ್ಟಪಟ್ಟು ತಯಾರಿ ಮಾಡಿಕೊಂಡಿದ್ದರು. ಆದರೆ, ಇದೀಗ ಸರ್ಕಾರ, ಏಕಾಏಕಿ, ಹಿಂದಿ ವಿಷಯದ ಅಂಕಗಳನ್ನು ಎಸ್ಎಸ್ಎಲ್ಸಿಯ ಒಟ್ಟು ಅಂಕಗಳಿಗೆ ಸೇರಿಸುವುದಿಲ್ಲ, ಹಿಂದಿಗೆ ಗ್ರೇಡ್ ಮಾತ್ರ ಕೊಡುವುದಾಗಿ ಹೇಳಿದ್ದರಿಂದ ವಿದ್ಯಾರ್ಥಿಗಳಿಗೆ ಆಘಾತವಾಗಿದೆ. ತಮ್ಮ ಶ್ರಮ ವ್ಯರ್ಥವಾಯಿತು ಎನ್ನುವ ನಿರಾಶೆ ಅವರಲ್ಲಿ ಮೂಡಿದೆ’ ಎಂದು ಹೇಳಿದ್ದಾರೆ.

‘ರಾಜ್ಯ ಸರ್ಕಾರ ಸಾಧಕ-ಬಾಧಕಗಳ ಸಮಗ್ರ ಚರ್ಚೆ ನಡೆಸಿದ ನಂತರ ಕ್ರಮ ಕೈಗೊಳ್ಳಬೇಕಿತ್ತು. ಹಿಂದಿ ವಿಷಯದ ಪರೀಕ್ಷೆಗೆ ಎರಡು ದಿನ ಬಾಕಿ ಇರುವಾಗ ಇಂತಹ ಕ್ರಮ ಕೈಗೊಂಡಿರುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-33-1953983985

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.