ಬೀದರ್: ಚಿದಂಬರ ಶಿಕ್ಷಣ ಸಂಸ್ಥೆಯ ಸಂಚಾಲಿತ ನಗರದ ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಗುರುವಾರ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.

ಶಾಲೆಯ ಟಾಪರ್ ಬುದ್ಧ ಶಾಲಿವಾನ್ (ಶೇ 98.40), ಸೇವಂತಿ ವಿಜಯಕುಮಾರ (ಶೇ 95.6), ಕೇದಾರ ಸಂಜುಕುಮಾರ (ಶೇ 93.76), ಗಾಯತ್ರಿ ಶಶಿಕಾಂತ (ಶೇ 93.44), ಮನೋಜ್ ವಿ. (ಶೇ 90.24), ಯುವರಾಜ ಕುಶಾಲರಾವ್ (ಶೇ 90.08) ಸೇರಿದಂತೆ 39 ವಿದ್ಯಾರ್ಥಿಗಳಿಗೆ ಶಾಲು ಹೊದಿಸಿ ಸತ್ಕರಿಸಲಾಯಿತು.

ಎಸ್ಎಸ್ಎಲ್ಸಿ ನಂತರ ಹಲವು ಕೋರ್ಸ್ಗಳು ಇವೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕೋರ್ಸ್ಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಸಾನ್ನಿಧ್ಯ ವಹಿಸಿದ್ದ ಸಂಸ್ಥೆಯ ನಿರ್ದೇಶಕ ಸ್ವಾತ್ಮಾನಂದಗಿರಿ ಮಹಾರಾಜ ಸಲಹೆ ಮಾಡಿದರು.

ಈಗ ಕೌಶಲಕ್ಕೆ ಬಹು ಬೇಡಿಕೆ ಇದೆ. ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಗಷ್ಟೇ ಸೀಮಿತರಾಗಬಾರದು. ಏನನ್ನಾದರೂ ಕೌಶಲ ಹೊಂದಬೇಕು ಎಂದು ಸಂಸ್ಥೆಯ ಆಡಳಿತಾಧಿಕಾರಿ ಡಾ. ಹಾವಗಿರಾವ್ ಮೈಲಾರೆ ತಿಳಿಸಿದರು.

ಡಯಟ್ ಉಪನ್ಯಾಸಕ ಸಂತೋಷ್ ಪೂಜಾರಿ, ಶಾಲೆಯ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿ, ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಉಪ ಪ್ರಾಚಾರ್ಯೆ ರೂಪಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-33-13280123

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.