ಬ್ಯಾಡಗಿ: ಶೋಷಿತರಲ್ಲಿ ಒಂದಾದ ನದಾಫ್/ಪಿಂಜಾರ್ ಸಮಾಜದ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಾಹ ನೀಡುವ ಮೂಲಕ ಕೈಲಾದ ಸಹಾಯವನ್ನು ಮಾಡಲಾಗುತ್ತಿದೆ ಎಂದು ಸಮಾಜದ ಮುಖಂಡ ರಾಜೇಸಾಬ ಕಳ್ಯಾಳ ಹೇಳಿದರು.

ಪಟ್ಟಣದಲ್ಲಿ ಕಳೆದ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ನದಾಫ್/ಪಿಂಜಾರ ಸಮಾಜದ ಮಕ್ಕಳಿಗೆ ಭಾನುವಾರ ಏರ್ಪಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರ ನೀಡುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು. ಅಲ್ಪಸಂಖ್ಯಾತರಿಗೆ ಸರ್ಕಾರ ಒತ್ತು ನೀಡಿದ್ದು, ಹಾಸ್ಟೇಲ್ ಸೌಲಭ್ಯವನ್ನು ಸಹ ಕಲ್ಪಿಸಿದೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ಕೆಲಸಕ್ಕೆ ಹಚ್ಚದೆ ಉನ್ನತ ಶಿಕ್ಷಣ ಕೊಡಿಸುವಂತೆ ಪಾಲಕರಲ್ಲಿ ಮನವಿ ಮಾಡಿಕೊಂಡರು.

ರಾಜಾಭಕ್ಷ ಕೂರಗುಂದ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಮ್ಮ ಸಮುದಾಯ ಸಾಕಷ್ಟು ಬದಲಾವಣೆಯನ್ನು ಕಾಣಲು ಎಲ್ಲರಿಗೂ ಶಿಕ್ಷಣದ ಅವಶ್ಯಕತೆ ಇದೆ. ಮಕ್ಕಳಿಗೆ ಬಾಲ್ಯದಲ್ಲಿಯೇ ಉತ್ತಮ ಸಂಸ್ಕಾರ ಹಾಗೂ ಶಿಕ್ಷಣವನ್ನು ನೀಡುವಂತೆ ಹೇಳಿದರು.

ಈ ವೇಳೆ ನದಾಫ್/ಪಿಂಜಾರ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್ ಹಡಗಲಿ, ಹಸನಸಾಬ್ ಮೈದೂರ, ರಿಯಾಜ್ ನದಾಫ್, ಅಬ್ದುಲ್ಮುನಾಫ್ ಎರೆಶೀಮಿ, ಮಹಮದ್ ಕುಡುತನಿ, ಖಾಶೀಂ ದೇವಿಹೊಸೂರ, ರಾಜೇಸಾಬ ಯರೆಶೀಮಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-22-1769772335

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.