ಚಾಮರಾಜನಗರ: ಡಾ.ಬಾಬು ಜಗಜೀವನರಾಂ ಸಂಘಟನೆಗಳ ಒಕ್ಕೂಟದ ವತಿಯಿಂದ ಜೂನ್ 7ರಂದು ಡಾ.ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಗೌರವಾಧ್ಯಕ್ಷ ಬಸವನಪುರ ರಾಜಶೇಖರ್ ತಿಳಿಸಿದರು.

ನಗರಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 60ಕ್ಕಿಂತ ಹೆಚ್ಚು ಅಂಕ ಪಡೆದಿರುವ ಮಾದಿಗ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವುದು ಒಕ್ಕೂಟದ ಆಶಯವಾಗಿದ್ದು ಇದರ ಭಾಗವಾಗಿ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಒಕ್ಕೂಟದ ಜಿಲ್ಲಾಧ್ಯಕ್ಷ ಹೆಚ್.ಹೆಚ್.ನಾಗರಾಜು ಮಾತನಾಡಿ, ಪ್ರತಿಭಾ ಪುರಸ್ಕಾರದ ಜೊತೆಗೆ ನೀಟ್, ಸಿಇಟಿ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಉದ್ದೇಶವನ್ನು ಒಕ್ಕೂಟ ಹೊಂದಿದೆ ಎಂದರು.

ಹೆಚ್ಚಿನ ಮಾಹಿತಿಗೆಗುಂಡ್ಲುಪೇಟೆ ಹಸಗೂಲಿ ಸಿದ್ದಯ್ಯ; 9591930446, ಚಾಮರಾಜನಗರ ಶಿವಕುಮಾರ್;7483934405, ಯಳಂದೂರು ಬಸವರಾಜು-9986216352, ಕೊಳ್ಳೇಗಾಲ ಗೋಪಾಲ್- 6360318044, ಹನೂರು ಬಿ.ಸಿ.ಸುರೇಶ್- 9945622014 ಸಂಪರ್ಕಿಸಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಗೌರವ ಸಲಹೆಗಾರ ಅರಕಲವಾಡಿ ಜವರಯ್ಯ, ಜಿಲ್ಲಾ ಉಪಾಧ್ಯಕ್ಷ ಹಸಗೂಲಿ ಸಿದ್ದಯ್ಯ, ಸಿ.ಚನ್ನಬಸವಯ್ಯ, ಬಿ.ಸಿ.ಸುರೇಶ್, ಕೊಳ್ಳೇಗಾಲ ಅಧ್ಯಕ್ಷ ಗೋಪಾಲ್, ಸಹ ಕಾರ್ಯದರ್ಶಿ ಶಿವಕುಮಾರ್ ರಾಮಸಮುದ್ರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-37-2090261689

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.