ಚಾಮರಾಜನಗರ: ಪ್ರಾಥಮಿಕ ಹಂತದ ಶಿಕ್ಷಣದಲ್ಲಿ ಬುನಾದಿ ಸಾಕ್ಷರತೆಯ ಸಾಮರ್ಥ್ಯ ವೃದ್ಧಿಯಾದರೆ ಎಸ್ಎಸ್ಎಲ್ಸಿ ಫಲಿತಾಂಶದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಅಭಿಪ್ರಾಯಪಟ್ಟರು.

ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಅಜೀಂ ಪ್ರೇಮ್ ಜೀ ಫೌಂಡೇಷನ್ನ ಸಂಸ್ಥೆ ಸಹಯೋಗದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಹಂತದ ಅನುಷ್ಠಾನಾಧಿಕಾರಿಗಳಿಗೆ ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆ ಶೇ 91ಫಲಿತಾಂಶ ಪಡೆದಿರುವುದು ಉತ್ತಮ ಸಾಧನೆಯಾಗಿದ್ದು ಇದಕ್ಕೆ ಕಾರಣರಾದ ಜಿಲ್ಲೆಯ ಶಿಕ್ಷಕರು ಅಭಿನಂದನಾರ್ಹರು. ವೈಯಕ್ತಿಕ ಸಮಸ್ಯೆ, ಸವಾಲುಗಳನ್ನು ಬದಿಗೊತ್ತಿ ಶಿಕ್ಷಕರು ಬದ್ದತೆಯಿಂದ ಪಾಠ ಮಾಡಿದ ಪರಿಣಾಮ ಉತ್ತಮ ಫಲಿತಾಂಶ ದೊರೆತಿದೆ ಎಂದರು.

ಸರ್ಕಾರಿ ಶಾಲೆಗೆ ಬರುವ ಪ್ರತಿ ಮಗುವಿನ ಮೇಲೆ ಸರ್ಕಾರ ₹ 22,000 ವಿನಿಯೋಗಿಸುತ್ತಿದೆ. ಈ ವರ್ಷವೂ ಕ್ರಿಯಾ ಯೋಜನೆ ಹಾಕಿಕೊಂಡು ಫಲಿತಾಂಶ ಪ್ರಗತಿಗೆ ಹೆಚ್ಚು ಕಾರ್ಯಪ್ರವೃತ್ತವಾಗಬೇಕಾಗಿದೆ. ಈ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು ಅಜೀಂ ಪ್ರೇಮ್ ಜೀ ಫೌಂಡೇಷನ್ ಜಂಟಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಸಂತಸದ ಸಂಗತಿ. 2026-27ನೇ ಸಾಲಿನಲ್ಲಿ ಜಿಲ್ಲೆಯು ಶೇ95ಕ್ಕೂ ಹೆಚ್ಚು ಫಲಿತಾಂಶ ಸಾಧಿಸುವ ಗುರಿ ಹೊಂದಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್ ತಿಳಿಸಿದರು.

ಡಯಟ್ ಪ್ರಾಂಶುಪಾಲ ಕಾಶೀನಾಥ್ ಮಾತನಾಡಿ, ‘ಶಿಕ್ಷಣ ಕ್ಷೇತ್ರದ ಸುಧಾರಣೆ ಹಾಗೂ ಬೆಳವಣಿಗೆಗೆ ಜಿಲ್ಲಾ ಪಂಚಾಯಿತಿ ಸಿಇಒ ಹೆಚ್ಚು ಆಸಕ್ತಿ, ಉತ್ಸುಕತೆ ತೋರುತ್ತಿರುವ ಪರಿಣಾಮ ಉತ್ತಮ ಫಲಿತಾಂಶಕ್ಕೆ ನೆರವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಚಂದ್ರಪಾಟೀಲ್ ಮಾತನಾಡಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಶಿಕ್ಷಣದ ಪ್ರಗತಿ ಇಲಾಖೆಯ ಜವಾಬ್ದಾರಿಯಾಗಿದೆ. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಎಲ್ಲರೂ ಶ್ರಮಿಸಬೇಕಾಗಿದೆ. ಚಾಮರಾಜನಗರ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದ ಸುಧಾರಣೆಗೆ ನಡೆಯುತ್ತಿರುವ ಎರಡು ದಿನಗಳ ಕಾರ್ಯಾಗಾರ ಹೆಚ್ಚು ಪುಷ್ಟಿ ನೀಡಲಿದೆ ಎಂದರು.

ಪ್ರಸಕ್ತ ವರ್ಷದ ಎಸ್ಎಸ್ಎಲ್ಸಿ ಫಲಿತಾಂಶ ವಿಶ್ಲೇಷಣೆಯ ಜೊತೆಗೆ ಮುಂದಿನ ವರ್ಷದ ಶೈಕ್ಷಣಿಕ ಕ್ರಿಯಾ ಯೋಜನೆಯನ್ನು ತಯಾರಿಸಿಕೊಳ್ಳುವುದು ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿದ್ದು ಜಿಲ್ಲೆಯ 120ಕ್ಕೂ ಹೆಚ್ಚು ಅನುಪಾಲನಾಧಿಕಾರಿಗಳು ಭಾಗವಹಿಸಿದ್ದಾರೆ.

ಜಿಲ್ಲಾ ಹಂತದಲ್ಲಿ ಡಯಟ್ನ ಹಿರಿಯ-ಕಿರಿಯ ಉಪನ್ಯಾಸಕರು, ಶಿಕ್ಷಣಾಧಿಕಾರಿಗಳು, ವಿಷಯ ಪರಿವೀಕ್ಷಕರು, ಉಪ ಯೋಜನಾ ಸಮನ್ವಯಾಧಿಕಾರಿಗಳು, ಬಿ.ಇ.ಒ, ಬಿ.ಆರ್.ಸಿ, ಇ.ಸಿ.ಒ, ಬಿ.ಆರ್.ಪಿ ಹಾಗೂ ಸಿ.ಆರ್.ಪಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-37-1038099165

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.