ಚನ್ನಗಿರಿ: ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ.ಎಸ್. ಬಿಂದುಶ್ರೀ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 622 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಮೂರನೇ ಸ್ಥಾನ ಪಡೆದಿದ್ದಾರೆ.

‘ಮನೆಯಲ್ಲಿನ ಬಡತನದಿಂದಾಗಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಸೇರಿದೆ. ಶಾಲೆಯಲ್ಲಿ ಶಿಕ್ಷಕರು ಎಲ್ಲ ವಿಷಯಗಳಲ್ಲೂ ಉತ್ತಮ ಶಿಕ್ಷಣ ನೀಡುತ್ತಿದ್ದರಿಂದ ನಾನು 622 ಅಂಕಗಳನ್ನು ಗಳಿಸಿದ್ದೇನೆ. ಸರ್ಕಾರಿ ಶಾಲೆಗಳಲ್ಲೂ ಉತ್ತಮ ಶಿಕ್ಷಣ ನೀಡುತ್ತಾರೆ ಎಂಬುದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ. ಕಠಿಣ ಅಭ್ಯಾಸ, ಅಂದಿನ ಪಾಠಗಳನ್ನು ಅಂದೇ ಕಲಿಯುತ್ತಾ, ಶಾಲೆಗೆ ಗೈರು ಆಗದೇ ಶಿಕ್ಷಕರು ನೀಡಿದ ತರಬೇತಿಯನ್ನು ಪಡೆದಿದ್ದೇನೆ. ಹಾಗೆಯೇ ಪತ್ರಿಕೆಗಳಲ್ಲಿ ಬರುವ ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಅಭ್ಯಾಸ ನಡೆಸಿದ್ದರ ಫಲವಾಗಿ ಉತ್ತಮ ಅಂಕವನ್ನು ಪಡೆಯಲು ಸಾಧ್ಯವಾಗಿದೆ. ಮುಂದೆ ದ್ವಿತೀಯ ಪಿಯುವಿನಲ್ಲಿ ಉತ್ತಮ ಅಂಕಗಳನ್ನು ಪಡೆಯಲು ಕಠಿಣ ಅಭ್ಯಾಸವನ್ನು ನಡೆಸುತ್ತೇನೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-43-1545441283

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.