ಚಿಕ್ಕಬಳ್ಳಾಪುರ: ಜಿಲ್ಲೆಯು ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಶೇ 90.88 ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 33ನೇ ಸ್ಥಾನಕ್ಕೆ ಭಾಜನವಾಗಿದೆ. ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಫಲಿತಾಂಶದಲ್ಲಿ ಹೆಚ್ಚಳವಾಗಿದೆ. ಆದರೆ ಸ್ಥಾನದಲ್ಲಿ ಕುಸಿತವಾಗಿದೆ.

ಪ್ರಸಕ್ತ ಸಾಲಿನಲ್ಲಿ ಒಟ್ಟು 14,375 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 12,999 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ (2024–25) ಜಿಲ್ಲೆಯಲ್ಲಿ 14,971 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 9,462 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಶೇ 63.2ರಷ್ಟು ಫಲಿತಾಂಶ ಬಂದಿತ್ತು. ರಾಜ್ಯ ಮಟ್ಟದಲ್ಲಿ ಕಳೆದ ವರ್ಷ 22ನೇ ಸ್ಥಾನವನ್ನು ಜಿಲ್ಲೆ ಪಡೆದಿತ್ತು.

ಆದರೆ ಈ ಬಾರಿ ಫಲಿತಾಂಶ ಹೆಚ್ಚಳವಾಗಿದ್ದರೂ 31ಕ್ಕೆ ಸ್ಥಾನದಲ್ಲಿ ಜಿಲ್ಲೆ ಇದೆ. ಈ ಬಾರಿ ಸರ್ಕಾರಿ ಶಾಲೆಗಳು ಶೇ 87.58, ಅನುದಾನಿತ ಶಾಲೆಗಳು 85.33 ಮತ್ತು ಅನುದಾನರಹಿತ ಶಾಲೆಗಳು ಶೇ 96.35 ಫಲಿತಾಂಶ ಪಡೆದಿವೆ. ಅನುದಾನರಹಿತ ಶಾಲೆಗಳ ಫಲಿತಾಂಶ ಹೆಚ್ಚಿದೆ.

ಸರ್ಕಾರಿ ಶಾಲೆಗಳಲ್ಲಿ ಒಟ್ಟು 6,557 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಈ ಪೈಕಿ 5,743 ಮಂದಿ ಉತ್ತೀರ್ಣರಾಗಿದ್ದಾರೆ. ಅನುದಾನಿತ ಶಾಲೆಗಳ 2,517 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 1,176 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅನುದಾನ ರಹಿತ ಶಾಲೆಗಳ 5,301 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 5,108 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಗ್ರಾಮೀಣ ವಿದ್ಯಾರ್ಥಿಗಳ ಸಾಧನೆ: ಜಿಲ್ಲೆಯಲ್ಲಿ ಈ ಬಾರಿ ನಗರ ಪ್ರದೇಶಕ್ಕಿಂತ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಗ್ರಾಮಿಣ ಪ್ರದೇಶದ ಒಟ್ಟು 9,051 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 8,232 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ ಶೆ 90.95 ಫಲಿತಾಂಶ ಪಡೆದಿದ್ದಾರೆ. ನಗರ ಪ್ರದೇಶದಲ್ಲಿ 5,324 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 4,767 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ 89.53 ಫಲಿತಾಂಶ ಬಂದಿದೆ.

ಕಳೆದ ವರ್ಷ ಜಿಲ್ಲೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗಿಂತ ನಗರ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದರು. ಆದರೆ ಈ ಬಾರಿ ನಗರ ಪ್ರದೇಶದ ವಿದ್ಯಾರ್ಥಿಗಳನ್ನು ಗ್ರಾಮೀಣ ವಿದ್ಯಾರ್ಥಿಗಳು ಹಿಂದಿಕ್ಕಿದ್ದಾರೆ.

ಗುಡಿಬಂಡೆ ಮತ್ತು ಬಾಗೇಪಲ್ಲಿ ತಾಲ್ಲೂಕಿನ ತಲಾ ಏಳು, ಚಿಂತಾಮಣಿ ತಾಲ್ಲೂಕಿನ ನಾಲ್ಕು, ಶಿಡ್ಲಘಟ್ಟ ತಾಲ್ಲೂಕಿನ ಆರು, ಗೌರಿಬಿದನೂರು ಮತ್ತು ಚಿಕ್ಕಬಳ್ಳಾಪುರ ತಾಲ್ಲೂಕಿನ ತಲಾ ಮೂರು ಸರ್ಕಾರಿ ಪ್ರೌಢಶಾಲೆಗಳು ಶೇ 100 ಫಲಿತಾಂಶ ಪಡೆದಿವೆ. ಜಿಲ್ಲೆಯಲ್ಲಿ ಒಟ್ಟು 32 ಸರ್ಕಾರಿ ಪ್ರೌಢಶಾಲೆಗಳು ಶೇ 100 ಫಲಿತಾಂಶ ಪಡೆದ ಸಾಧನೆ ಮಾಡಿವೆ. ಅನುದಾನಿತ ಐದು ಮತ್ತು ಅನುದಾನ ರಹಿತ 59 ಪ್ರೌಢಶಾಲೆಗಳು ಶೇ 100ರಷ್ಟು ಫಲಿತಾಂಶಕ್ಕೆ ಭಾಜನವಾಗಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-16-1391776777

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.