ಚಿಕ್ಕಬಳ್ಳಾಪುರ: ಪ್ರಪಂಚದ ಯಾವುದೇ ದೇಶದಲ್ಲಿಯೂ ಇಲ್ಲದ ಸಂಸ್ಕೃತಿ, ಭಾಷೆ, ಧರ್ಮ ಭಾರತದಲ್ಲಿ ಇದೆ. ದೇಶದ ಬಗ್ಗೆ ಎಲ್ಲರಿಗೂ ಹೆಮ್ಮೆ ಇರಬೇಕು. ದೇಶ ಕಟ್ಟುವ ಕೆಲಸ ಮಾಡಬೇಕು ಎಂದು ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಸಂದೀಪ್ ರೆಡ್ಡಿ ತಿಳಿಸಿದರು.

ನಗರದಲ್ಲಿ ಪ್ರಜಾಪಿತಾ ಬ್ರಹ್ಮಾಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯ ಹಾಗೂ ಭಗತ್ ಸಿಂಗ್ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸೋಮವಾರ ಹಮ್ಮಿಕೊಂಡಿದ್ದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿದ್ಯಾರ್ಥಿಗಳು ಮಾನವೀಯತೆ ರೂಢಿಸಿಕೊಳ್ಳಬೇಕು. ಪ್ರತಿ ಹಂತದಲ್ಲೂ ಗುರಿ ಇಟ್ಟುಕೊಳ್ಳಬೇಕು. ಗುರು ಹಿರಿಯರು, ಪೋಷಕರ ತಾಯಿ ಬಗ್ಗೆ ವ್ಯಾಸಂಗ ಮಾಡಿದ ಶಾಲೆಯ ಬಗ್ಗೆ ಅಭಿಮಾನ, ಗೌರವ, ಪ್ರೀತಿ ಹೊಂದಿರಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳಾದ ಪ್ರಣತಿರಾಜ್, ಧನುಶ್ರೀ, ಕುಶಲ್ ಕೆ.ಎಸ್, ಕೆ.ಎನ್.ವೀಣಾ, ಶ್ರುತಿ ಸಿ., ಪೂರ್ವಿಕಾ ಆರ್., ಕರುಣಶ್ರೀ, ನಿಹಾರಿಕಾ ಕೆ.ಎನ್, ಅನುಜ, ಚಂದ್ರದೀಪ ಕೆ.ಎಲ್, ವೈಷ್ಣವಿ ಎಸ್., ರಾಜಸ್ ಸಿ.ಎಂ., ತೇಜಸ್ವಿನಿ ಎಂ., ದರ್ಶನ್, ವಿಷ್ಣು, ಅನುಪಮಾ ಎಂ ಅವರನ್ನು ಸನ್ಮಾನಿಸಲಾಯಿತು.

ಕುಮಾರೀಸ್ ಈಶ್ವರೀಯ ವಿಶ್ವ ವಿದ್ಯಾಲಯದ ಸ್ಥಾನಿಕ ಸಂಚಾಲಕಿ ಬಿ.ಕೆ.ಲಲಿತ, ರಾಮಕೃಷ್ಣಣ್ಣ, ಡಿಡಿಪಿಐ ಕಚೇರಿಯ ವಿಷಯ ಪರಿವೀಕ್ಷಕ ಅಂಜಿನಪ್ಪ, ಹಿರಿಯ ಪತ್ರಕರ್ತ ಎಚ್.ವಿ.ಸೋಮಶೇಖರ್, ಶಿಕ್ಷಕ ಮಂಜುನಾಥ್, ಬಿ.ಕೆ.ರೇಣುಕಾ, ಚಿನ್ನಮ್ಮ, ಲಕ್ಷ್ಮಿದೇವಮ್ಮ, ಮಂಜುಳಾ, ಎಂ. ಕೃಷ್ಣಪ್ಪ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-16-1274012858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.