ಗಂಗಾವತಿ: ತಾಲ್ಲೂಕಿನ ಚಿಕ್ಕಬೆಣಕಲ್ ಗ್ರಾಮದ ಪಿಎಂಶ್ರೀ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವ ಮೂಲಕ ಶಾಲೆಗೆ ಶೇ 94.64ರಷ್ಟು ಫಲಿತಾಂಶ ತಂದಿದ್ದಾರೆ.

ಈ ಬಾರಿ ಶಾಲೆಯಿಂದ 56 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 5 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 25 ಪ್ರಥಮ ಶ್ರೇಣಿ, 16 ದ್ವಿತೀಯ ಶ್ರೇಣಿ, 7 ಜನ ವಿದ್ಯಾರ್ಥಿಗಳು ಸಾಮಾನ್ಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಶಾಲೆಗೆ ರಶ್ಮಿ ಬೀರಪ್ಪ 611 ಅಂಕ (ಶೇ 97.76) ಗಳಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಹುಲಿಗೆಮ್ಮ ಹನುಮಂತಪ್ಪ 554 ಅಂಕ (ಶೇ 88.64), ಪಾರ್ವತಿ ವೀರೇಶ ಅಂಗಡಿ 541 ಅಂಕ (ಶೇ 86.56), ಕೃಷ್ಣಮ್ಮ ವಿರುಪಣ್ಣ ಕಜ್ಜಿ 525 ಅಂಕ (ಶೇ 84), ಅನಿತಾ ಬೆಟದಪ್ಪ ಗೊಂದಿ 504 ಅಂಕ (ಶೇ 80.64) ಪಡೆಯುವ ಮೂಲಕ ನಂತರದ ಸ್ಥಾನಗಳಲ್ಲಿ ಇದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಮುಖ್ಯಶಿಕ್ಷಕ ಸುಧಾಕರ ಜಿ. ಸೇರಿ ಶಿಕ್ಷಕರು, ಆಡಳಿತ ಮಂಡಳಿ ಹಾಗೂ ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-35-2085006580

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.