ಚಿಂತಾಮಣಿ: ಎಸ್ಎಸ್ಎಲ್ಸಿ ಹಿಂದಿ ವಿಷಯದ ಪರೀಕ್ಷೆಯು ಮಂಗಳವಾರ ತಾಲ್ಲೂಕಿನ ಎಲ್ಲ 11 ಕೇಂದ್ರಗಳಲ್ಲಿ ಗೊಂದಲ ಮತ್ತು ಅಹಿತಕರ ಘಟನೆಗಳಿಲ್ಲದೆ ಸುಸೂತ್ರವಾಗಿ ನಡೆಯಿತು.

ಹಿಂದಿ ವಿಷಯಕ್ಕೆ ಗ್ರೇಡ್ ಮಾತ್ರ ನೀಡುವ ಸರ್ಕಾರದ ನಿರ್ಧಾರ ಮತ್ತು ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕುವುದಾಗಿ ವಿವಿಧ ಕನ್ನಡಪರ ಸಂಘಟನೆಗಳು ನೀಡಿದ್ದ ಹೇಳಿಕೆಯಿಂದ ಹಿಂದಿ ಪರೀಕ್ಷೆ ನಡೆಯುವ ಬಗ್ಗೆ ಗೊಂದಲಗಳು ಮೂಡಿದ್ದವು.

ಎಸ್ಎಸ್ಎಲ್ಸಿ ಒಟ್ಟು ಅಂಕಗಳನ್ನು 625ರಿಂದ 525ಕ್ಕೆ ಇಳಿಸಲಾಗಿತ್ತು. ಹಿಂದಿ ಭಾಷೆಗೆ ಅಂಕಗಳ ಬದಲಾಗಿ ಗ್ರೇಡ್ ನೀಡಲಾಗುವುದು. ಈ ವರ್ಷದಿಂದಲೇ ಈ ನಿಯಮ ಜಾರಿಯಾಗಲಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆಗಳಿಂದ ವಿದ್ಯಾರ್ಥಿಗಳು ಗೊಂದಲಕ್ಕೀಡಾಗಿದ್ದರು. ಮತ್ತೊಂದೆಡೆ ಕನ್ನಡಪರ ಸಂಘಟನೆಗಳು ಹಿಂದಿ ಭಾಷೆ ಪರೀಕ್ಷೆ ದಿನ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕುವುದಾಗಿ ಬೆದರಿಕೆ ಹಾಕಿದ್ದವು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮನೆ ಮಾಡಿತ್ತು.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಚ್ 25ರಂದು ಜಿಲ್ಲೆಯ ಉಪನಿರ್ದೇಶಕರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದು ಹಿಂದಿ ಪರೀಕ್ಷೆ ಸುಸೂತ್ರವಾಗಿ ನಡೆಯುವಂತೆ ರಕ್ಷಣೆ ನೀಡಲು ನಿರ್ದೇಶನ ನೀಡಿತ್ತು.

ಪಾಲಕರು ತಮ್ಮ ಮಕ್ಕಳೊಂದಿಗೆ ಪರೀಕ್ಷಾ ಕೇಂದ್ರದ ಕೊಠಡಿವರೆಗೆ ಆಗಮಿಸಿ, ಯಾವುದೇ ಗೊಂದಲಗಳಿಗೆ ಕಿವಿ ಗೋಡದೆ ಉತ್ತಮ ಅಂಕ ಗಳಿಸಬೇಕೆಂದು ಹೇಳುತ್ತಿರುವ ದೃಶ್ಯ ಕಂಡುಬಂದಿತು.

ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳೊಂದಿಗೆ ತೃತೀಯ ಭಾಷೆ ಹಿಂದಿ ಅಂಕಗಳು ಲೆಕ್ಕಕ್ಕೆ ಇಲ್ಲವಂತೆ ಗ್ರೇಡ್ ಕೊಡುತ್ತಾರೆ ಎಂದು ಮಾತನಾಡಿಕೊಳ್ಳುತ್ತ ಪರೀಕ್ಞಾ ಕೇಂದ್ರಗಳಿಗೆ ತೆರಳಿದರು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ತನುಜಾ, ಬಿಆರ್ಸಿ ಕ್ಷೇತ್ರ ಸಮನ್ವಯ ಅಧಿಕಾರಿ ಗಿರಿಜಮ್ಮ, ನೋಡಲ್ ಅಧಿಕಾರಿ ನಾಗರಾಜ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದರು.

ಪೊಲೀಸರು ಎಲ್ಲ 11 ಕೇಂದ್ರಗಳಿಗೆ ಬಂದೋಬಸ್ತ್ ಮಾಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-16-2042419948

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.