ಚಿಂತಾಮಣಿ: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿ ಉತ್ತೀರ್ಣರಾದ ನಿವೃತ್ತ ಸರ್ಕಾರಿ ನೌಕರರ ಮೊಮ್ಮಕ್ಕಳನ್ನು ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದಿಂದ ಶನಿವಾರ ಗೌರವಿಸಲಾಯಿತು.

ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿಯಲ್ಲಿ ಸಾಧನೆಗೈದ ಎನ್.ಕಾರುಣ್ಯ, ಎನ್.ವೇದ, ಸ್ಕಂದ ಶ್ರೀವಾತ್ಸವ ಹಾಗೂ ಎಸ್ಎಸ್ಎಲ್ಸಿಯಲ್ಲಿ ಅಧಿಕ ಅಂಕ ಗಳಿಸಿದ ಜಿ.ಆರ್. ನಯನ ಅವರಿಗೆ ನಗದು ಬಹುಮಾನ ನೀಡಿ ಪುರಸ್ಕರಿಸಲಾಯಿತು.

ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ.ವಿ.ಚೌಡಪ್ಪ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಂಕಗಳನ್ನು ಗಳಿಸುವುದು ಮಾತ್ರ ಮುಖ್ಯವಲ್ಲ. ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲರೂ ಅಂಕಗಳನ್ನು ಬೆನ್ನಟ್ಟುವುದು ಸಹಜ. ಅಂಕಗಳ ಜತೆಗೆ ಉತ್ತಮ ಸಂಸ್ಕಾರ, ನಡವಳಿಕೆ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದು ಸಲಹೆ ನೀಡಿದರು.

ರಾಜ್ಯ ಸಂಘದ ಕಾರ್ಯದರ್ಶಿ ಎಚ್.ಮುನಿಯಪ್ಪ, ಜಿಲ್ಲಾ ಸಂಘದ ಉಪಾಧ್ಯಕ್ಷ ಕೆವಿ. ಚೌಡಪ್ಪ, ಜಿಲ್ಲಾ ಸಂಘದ ಪ್ರತಿನಿಧಿ ಅಂಜನಾಚಾರಿ, ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ, ಉಪಾಧ್ಯಕ್ಷ ಎ.ಎಸ್. ರಾಮಚಂದ್ರಮೂರ್ತಿ, ಕಾರ್ಯದರ್ಶಿ ಎಸ್.ಆಂಜನಪ್ಪ, ಡಿಜಿಎಂ ನರಸಿಂಹಮೂರ್ತಿ, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-16-718616209

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.