ಚಿತ್ತಾಪುರ: ಪಟ್ಟಣದಲ್ಲಿರುವ ವಿಶ್ವಗುರು ಶಿಕ್ಷಣ ಹಾಗೂ ಕಲ್ಯಾಣ ಸಂಸ್ಥೆಯ ಮಹಾದೇವಮ್ಮ ಬಿ. ಪಾಟೀಲ್ ಸ್ಮಾರಕ ಸಿಬಿಎಸ್ಇ ಶಾಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 99ರಷ್ಟು ಫಲಿತಾಂಶ ದಾಖಲಿಸಿದೆ.

2025-26ನೇ ಸಾಲಿನ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 56 ವಿದ್ಯಾರ್ಥಿಗಳ ಪೈಕಿ 18 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, 19 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 16 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಶೇ 99 ರಷ್ಟು ಫಲಿತಾಂಶ ಬಂದಿದೆ.

ಪ್ರೇಮ್ ಕಪಿಲ್ ಜಿತುರೆ ಶೇ.94.40 ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಚೇತನ್ ಬಸವರಾಜ ಶೇ 93ರಷ್ಟು ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಅಯಗಯಾನ್ ಅಲೀಂಸಾಬ್ ಶೇ 91.20 ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.

ಶಾಲೆಯ ವಿದ್ಯಾರ್ಥಿಗಳ ಉತ್ತಮ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ನಾಗರೆಡ್ಡಿ ಪಾಟೀಲ್ ಕರದಾಳ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-31-1054293935

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.