ಮಂಗಳೂರು: ಗುಣಮಟ್ಟದ ಶಿಕ್ಷಣ ವ್ಯವಸ್ಥೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆ ದೇಶದಲ್ಲೇ ಉನ್ನತ ಸ್ಥಾನಕ್ಕೇರಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್. ವಿ ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸೋಮವಾರ ಇಲ್ಲಿ ಏರ್ಪಡಿಸಿದ್ದ 2026ನೇ ಸಾಲಿನ ಎಸ್ಎಸ್ಎಸ್ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಸ್ಥಾನ ಪಡೆದ ವಿದ್ಯಾರ್ಥಿಗಳ ಹಾಗೂ ಉತ್ತಮ ಫಲಿತಾಂಶ ಪಡೆದ ಶಾಲೆಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಅಂಕ ಪಡೆಯುವುದಷ್ಟೇ ಶಿಕ್ಷಣವಲ್ಲ. ಮಕ್ಕಳ ಸರ್ವತೋಮುಖ ಬೆಳವಣಿಗೆ ಮುಖ್ಯ. ಅಂಕ ಗಳಿಕೆಯ ಶಿಕ್ಷಣಕ್ಕಿಂತಲೂ ಗುಣಮಟ್ಟದ ಶಿಕ್ಷಣಕ್ಕೆ ಜಿಲ್ಲೆಯು ಖ್ಯಾತಿ ಪಡೆದಿದೆ. ಇದರಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಪಾತ್ರ ಮಹತ್ವದ್ದು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನಕ್ಕೇರಿರುವ ಜಿಲ್ಲೆಯು ಮುಂದೆಯೂ ಅದನ್ನು ಉಳಿಸಿಕೊಳ್ಳಬೇಕು’ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ‘ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅನುತ್ತೀರ್ಣ ಆದವರ ಪ್ರಮಾಣವೂ ಕಡಿಮೆಯಾಗಿದೆ. ಇದೊಂದು ಸಾಂಘಿಕ ಪ್ರಯತ್ನದ ಫಲ’ ಎಂದರು.

ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಶಿಧರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-29-278413745

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.