ದಾವಣಗೆರೆ: ‘ಹೊನ್ನಾಳಿಯ ಹಿರೇಕಲ್ಮಠದ ಪಂಚಾಚಾರ್ಯ ಸಮುದಾಯ ಭವನದಲ್ಲಿ ಮೇ 31ರಂದು ಬೆಳಿಗ್ಗೆ 10.30ಕ್ಕೆ ಹೊನ್ನಾಳಿ ತಾಲ್ಲೂಕು ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ’ ಎಂದು ಮುಖಂಡ ಅಶೋಕ ಎಚ್.ಬಿ. ತಿಳಿಸಿದರು.

‘ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಶೇ 60ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮುದಾಯದ ಹೊನ್ನಾಳಿ ತಾಲ್ಲೂಕಿನ ವಿದ್ಯಾರ್ಥಿಗಳು ಮೇ 25ರೊಳಗೆ ಅಂಕಪಟ್ಟಿಯ ಜೆರಾಕ್ಸ್ ಪ್ರತಿ ಹಾಗೂ 2 ಭಾವಚಿತ್ರಗಳೊಂದಿಗೆ ಅರ್ಜಿ ಸಲ್ಲಿಸಬೇಕು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಯಾವುದೇ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಬೆಳ್ಳಿಪದಕ ನೀಡಿ ಗೌರವಿಸಲಾಗುವುದು’ ಎಂದು ಹೇಳಿದರು.

‘23 ವರ್ಷಗಳಿಂದ ಈ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬಂದಿದ್ದೇವೆ. ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ನಿವೃತ್ತ ನೌಕರರನ್ನೂ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು’ ಎಂದು ಸಂಘಟನೆಯ ಅಧ್ಯಕ್ಷ ಪಿ. ವೀರಣ್ಣ ಪಟ್ಟಣಶೆಟ್ಟಿ ಮಾಹಿತಿ ನೀಡಿದರು.

ಹೆಚ್ಚಿನ ಮಾಹಿತಿಗೆ ಮೊ.ನಂ. 9480767070, 9880709470ಗೆ ಸಂಪರ್ಕಿಸಬಹುದು.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ಹಾಲೇಶ್ ಕುಂಕೋದ್, ಹಾಲಸ್ವಾಮಿ, ಪ್ರಭು ಎಚ್.ಆರ್. ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-43-979690434

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.