ದಾವಣಗೆರೆ: ಎಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಉತ್ತೀರ್ಣರಾದ ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಮೇ 25ರಂದು ನಗರದ ಶಿವಯೋಗಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಾವಣಗೆರೆ ಜಿಲ್ಲಾ ಮಾದಿಗ ಮಹಾಸಭಾದ ಅಧ್ಯಕ್ಷ ಬಿ.ಎಚ್.ವೀರಭದ್ರಪ್ಪ ತಿಳಿಸಿದರು.

ಅಂದು ಬೆಳಿಗ್ಗೆ 10ಕ್ಕೆ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಮೆರವಣಿಗೆಗೆ ಚಾಲನೆ ನೀಡುವರು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಬೆಳಿಗ್ಗೆ 11ಕ್ಕೆ ಶಿವಯೋಗಿ ಮಂದಿರದ ನೂತನ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರು ಶೈಕ್ಷಣಿಕ ಕಾರ್ಯಾಗಾರಕ್ಕೆ ಚಾಲನೆ ನೀಡುವರು. ಜಿಲ್ಲಾ ಪಂಚಾಯಿತಿ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ವಿವಿಧ ಇಲಾಖೆಗಳ ಅಧಿಕಾರಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಉಪನ್ಯಾಸ ನೀಡಲಿದ್ದಾರೆ. ಸಾವಿರಾರು ವಿದ್ಯಾರ್ಥಿಗಳು, ಪಾಲಕರು ಭಾಗವಹಿಸುವರು ಎಂದು ತಿಳಿಸಿದರು.

ಮಧ್ಯಾಹ್ನ 2.30ಕ್ಕೆ ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ, ಹಿರಿಯೂರು ಕೋಡಿಹಳ್ಳಿ ಮಠದ ಷಡಕ್ಷರ ಮುನಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಧ್ಯಕ್ಷತೆಯಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸಮಾರಂಭ ಉದ್ಘಾಟಿಸುವರು. ಮಾಜಿ ಸಚಿವ ಎಚ್.ಆಂಜನೇಯ ಪ್ರಮಾಣಪತ್ರ ಮತ್ತು ಬ್ಯಾಗ್ ವಿತರಿಸುವರು. ಜಿಲ್ಲೆಯ ಎಲ್ಲಾ ಶಾಸಕರು ವಿದ್ಯಾರ್ಥಿಗಳನ್ನು ಸನ್ಮಾನಿಸಲಿದ್ದಾರೆ ಎಂದು ಹೇಳಿದರು.

ಬಯಲು ಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ.ಮಂಜಪ್ಪ, ಮಾಜಿ ಸಚಿವ ಹಲ್ಕೋಡು ಹನುಮಂತಪ್ಪ, ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ, ಸಫಾಯಿ ಕರ್ಮಚಾರಿ ಆಯೋಗದ ಪಿ.ರಘು, ಅಶೋಕ ಸಾಲಪ್ಪ, ‘ಧೂಡಾ’ ಅಧ್ಯಕ್ಷ ದಿನೇಶ್ ಶೆಟ್ಟಿ, ಪ್ರಾಧ್ಯಾಪಕ ಎಚ್.ವಿಶ್ವನಾಥ್ ಹಾಗೂ ಇನ್ನಿತರ ಮುಖಂಡರು ಭಾಗವಹಿಸಲಿದ್ದಾರೆ. ಒಟ್ಟು 1,172 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುತ್ತಿದೆ ಎಂದರು.

ಮಹಾಸಭಾದ ಗೌರವಾಧ್ಯಕ್ಷ ರವಿನಾರಾಯಣ, ಪ್ರಧಾನ ಕಾರ್ಯದರ್ಶಿ ಹೆಗ್ಗೆರೆ ರಂಗಪ್ಪ, ಉಪಾಧ್ಯಕ್ಷರಾದ ಎಲ್.ಎಂ.ಹನುಮಂತಪ್ಪ, ಎಚ್.ಮಲ್ಲೇಶ್, ಆದಾಪುರ ನಾಗರಾಜ, ವಕೀಲರಾದ ಹಲಗೇರಿ ಮಂಜಪ್ಪ, ದುರ್ಗೇಶ ಗುಡಿಗೇರಿ, ಸಹ ಕಾರ್ಯದರ್ಶಿಗಳಾದ ಸಿ.ಬಸವರಾಜ, ಜಿ.ರಾಕೇಶ್, ಬಿ.ಆರ್.ಶಿವಮೂರ್ತಿ, ಎನ್.ಶಂಕರ, ಎ.ಮಂಜು, ದಿನೇಶ ಇನ್ನಿತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-43-1942140534

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.