ದಾವಣಗೆರೆ: ಜಿಲ್ಲೆಯ ಸಾದರ ನೌಕರರ ಬಳಗದಿಂದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಾದರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಸಾದರ ಸಾಧನಾ ಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 90ಕ್ಕೂ ಹೆಚ್ಚು ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಹ ವಿದ್ಯಾರ್ಥಿಗಳು ತಮ್ಮ ಸ್ವವಿಳಾಸದೊಂದಿಗೆ ಅರ್ಜಿಯನ್ನು, ದೃಢೀಕೃತ ಅಂಕಪಟ್ಟಿ ಹಾಗೂ ಪಾಸ್ಪೋರ್ಟ್ ಸೈಜಿನ ಭಾವಚಿತ್ರದೊಂದಿಗೆ ಜೂನ್ 5ರ ಒಳಗೆ ನಿಗದಿತ ವಿಳಾಸಕ್ಕೆ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ: ಕೆ.ನಾಗಪ್ಪ, ಅಧ್ಯಕ್ಷರು, ಸಾದರ ನೌಕರರ ಬಳಗ, ಸಾದರ ಪತ್ತಿನ ಸಹಕಾ ಸೌಹಾರ್ದ ಬ್ಯಾಂಕ್, 16 ಬಿ ಕ್ರಾಸ್, ತರಳಬಾಳು ಬಡಾವಣೆ, ದಾವಣಗೆರೆ 577005. ಹೆಚ್ಚಿನ ಮಾಹಿತಿಗಾಗಿ ಮೊ.ನಂ. 98445 01366, 98863 39984ಗೆ ಸಂಪರ್ಕಿಸಬಹುದು.

ಜಿಲ್ಲಾ ಇಂಟಕ್ ಅಧ್ಯಕ್ಷರಾಗಿ ಕೆ.ಎಂ. ಮಂಜುನಾಥ್ ನೇಮಕ

ದಾವಣಗೆರೆ: ಜಿಲ್ಲಾ ಇಂಟಕ್ ವಿಭಾಗದ ಅಧ್ಯಕ್ಷರಾಗಿ ಕೆ.ಎಂ. ಮಂಜುನಾಥ್ ಅವರನ್ನು ನೇಮಕ ಮಾಡಲಾಗಿದೆ ಎಂದು ಇಂಟಕ್ ಕರ್ನಾಟಕ ರಾಜ್ಯ ಶಾಖೆಯ ಅಧ್ಯಕ್ಷ ಡಿ. ಲಕ್ಷ್ಮಿ ವೆಂಕಟೇಶ್ ತಿಳಿಸಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಇಂಟಕ್ ವಿಭಾಗದ ಅಧ್ಯಕ್ಷ ಜಿ. ಸಂಜೀವ್ ರೆಡ್ಡಿ ಅವರ ಆದೇಶದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-43-2100571725

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.