ಗದಗ: ನಗರದ ಸಿದ್ಧಲಿಂಗ ನಗರದ ಸರ್ಕಾರಿ ಪ್ರೌಢಶಾಲೆ ತನ್ನ 33 ವರ್ಷಗಳ ಶೈಕ್ಷಣಿಕ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 99.13 ದಾಖಲೆಯ ಫಲಿತಾಂಶ ದಾಖಲಿಸಿದೆ. ಶಿಕ್ಷಕ ವೃಂದದ ವಿಶೇಷ ಪ್ರಯತ್ನ ಹಾಗೂ ವಿದ್ಯಾರ್ಥಿಗಳ ಕಲಿಕಾ ಆಸಕ್ತಿಯಿಂದ ಇದು ಸಾಧ್ಯವಾಗಿದೆ ಎಂದು ಶಾಲಾ ದತ್ತು ಉಸ್ತುವಾರಿ ಬಸವರಾಜ ಧಾರವಾಡ ಹೇಳಿದರು.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿದ ಹಾಗೂ ಸತತ ಪರಿಶ್ರಮ ಹಾಕಿದ ಶಿಕ್ಷಕವೃಂದಕ್ಕೆ ಹಾಗೂ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

‘ಮೂರು ವರ್ಷಗಳ ಹಿಂದೆ ಸಭಾಪತಿ ಬಸವರಾಜ ಹೊರಟ್ಟಿ ದಂಪತಿ ಹಾಗೂ ವಿವಿಧ ಜನಪ್ರತಿನಿಧಿಗಳ ಹಾಗೂ ದಾನಿಗಳ ಸಹಕಾರದಿಂದ ಶಾಲೆಯನ್ನು ಅಭಿವೃದ್ಧಿಪಡಿಸಿ ಎಲ್ಲ ಮೂಲಸೌಕರ್ಯ ಒದಗಿಸುವುದರ ಜೊತೆಗೆ ಗುಣಮಟ್ಟದ ಕಲಿಕೆಗೆ ಉತ್ತಮ ವಾತಾವರಣ ಕಲ್ಪಿಸಿ ಕೊಡಲಾಗಿತ್ತು. ಆ ಹಿನ್ನೆಲೆಯಲ್ಲಿ ಶಿಕ್ಷಕರು ಸಹ ಎಲ್ಲ ರೀತಿಯಿಂದ ಸಹಕರಿಸಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗಾಗಿ ಸತತ ಪರಿಶ್ರಮ ಹಾಕಿದ್ದಕ್ಕಾಗಿ ಜಿಲ್ಲಾಮಟ್ಟದಲ್ಲಿ ಒಂದು ಪ್ರತಿಷ್ಠಿತ ಶಾಲೆಯಾಗಿ ರೂಪುಗೊಂಡಿದೆ’ ಎಂದರು.

ಇದೇ ಸಂದರ್ಭದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ವಿಶೇಷ ಪರಿಶ್ರಮ ಪಟ್ಟ ಶಿಕ್ಷಕ ವೃಂದಕ್ಕೆ ಡಿಡಿಪಿಐ ಆರ್.ಎಸ್.ಬುರುಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರವೀಂದ್ರ ಶೆಟ್ಟಪ್ಪನವರ್, ನೋಡಲ್ ಅಧಿಕಾರಿಗಳಾದ ಶಂಕರ್ ಹಡಗಲಿ, ಎಸ್ಡಿಎಂಸಿ ಅಧ್ಯಕ್ಷೆ ಸುನಂದ ಕಟವಟಿ, ನೂತನ ಮುಖ್ಯೋಪಾಧ್ಯಯರಾದ ಎಚ್.ವೈ.ತಕ್ಕಲಕೋಟಿ ಹಿಂದಿನ ಪ್ರಭಾರಿ ಮುಖ್ಯೋಪಾಧ್ಯಾಯರಾದ ಜಯಲಕ್ಷ್ಮಿ ಅಣ್ಣಿಗೇರಿ ಹಲವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-23-1259214174

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.