ಗದಗ: 2025– 2026ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಫಲಿತಾಂಶವು ರಾಜ್ಯದ ಇತಿಹಾಸದಲ್ಲಿ ದಾಖಲೆ ಬರೆದಿದ್ದು ವಿದ್ಯಾರ್ಥಿಗಳು, ಶಿಕ್ಷಕರು, ಪಾಲಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ನಿರಂತರ ಪ್ರರಿಶ್ರಮಕ್ಕೆ ಸಿಕ್ಕ ಪ್ರತಿಫಲವಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘಟನೆ, ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

‘ಪಿಯುಸಿ ಫಲಿತಾಂಶ ಶೇ 76.65 ಆಗಿದ್ದು ಕಳೆದ ವರ್ಷಕ್ಕಿಂತ ಶೇ 10 ಹೆಚ್ಚು ಆಗಿರುವುದು ಸಮಾಧಾನ ತಂದಿದೆ’ ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಆರ್.ಎಸ್.ಬುರಡಿ ಮಾತನಾಡಿ, ‘ಗದಗ ಜಿಲ್ಲೆಯು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಲು ಮೂರು ಸರಣಿ ಪರೀಕ್ಷೆ ನಡೆಸಿರುವುದು, ಚಿಕಿತ್ಸಾ ಬೋಧನಾ ಪದ್ದತಿ ಅಳವಡಿಸಿಕೊಂಡಿರುವುದು, ಘಟಕ ಪರೀಕ್ಷೆ ನಡೆಸಿರುವುದು ಅಲ್ಲದೇ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೀಡಿದ 29 ಅಂಶಗಳ ಕಾರ್ಯಕ್ರಮಗಳಿಂದ ಉತ್ತಮ ಫಲಿತಾಂಶ ಬರಲು ಸಾಧ್ಯವಾಗಿದೆ’ ಎಂದು ತಿಳಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಎಸ್.ಸಿರ್ಸಿ, ಉಪನ್ಯಾಸಕರಾದ ಶ್ರೀಶೈಲ ಬೀರಕಬ್ಬಿ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಫ್. ಪೂಜಾರ, ಗದಗ ಜಿಲ್ಲಾ ಶಹರ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶರಣಪ್ಪ ನಾಗರಳ್ಳಿ, ಪ್ರಾಚಾರ್ಯ ಐ.ಬಿ.ಹಾದಿಮನಿ, ಪ್ರಾಥಮಿಕ ಶಾಲಾ ಶಿಕ್ಷಕರ ಅಧ್ಯಕ್ಷ ವಿ.ಎಂ.ಹಿರೇಮಠ ಅವರು ಪರೀಕ್ಷೆ ಫಲಿತಾಂಶ ಅಭಿಪ್ರಾಯಗಳನ್ನು ಹಂಚಿಕೊಂಡರು.

ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಆರ್.ಎಸ್.ಬುರಡಿ, ಡಿಡಿಪಿಯು ಜಿ.ಎಸ್.ಸಿರ್ಸಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡವಿನಮನಿ ಅವರನ್ನು ಸನ್ಮಾನಿಸಲಾಯಿತು.

ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಇತ್ತೀಚೆಗೆ ಪಿಎಚ್ಡಿ ಪಡೆದವರಿಗೆ ಜಿಲ್ಲಾ ಮಟ್ಟದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಣಯಿಸಲಾಯಿತು.

ಪ್ರಾಚಾರ್ಯ ಅಶೋಕ ಅಂಗಡಿ, ಉಪನ್ಯಾಸಕ ಎಸ್.ಐ.ಮೇಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-23-412224204

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.