ಹನಮಸಾಗರ: ಇಲ್ಲಿನ ಅನ್ನದಾನೇಶ್ವರ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಅನ್ನದಾನೇಶ್ವರ ಪ್ರೌಢಶಾಲೆ 2025-26ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 94.28 ಫಲಿತಾಂಶ ದಾಖಲಿಸಿ ಉತ್ತಮ ಸಾಧನೆ ಮಾಡಿದೆ.

ಪರೀಕ್ಷೆಗೆ ಒಟ್ಟು 35 ವಿದ್ಯಾರ್ಥಿಗಳು ಹಾಜರಾಗಿದ್ದು, 33 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅದರಲ್ಲಿ ಇಬ್ಬರು ವಿದ್ಯಾರ್ಥಿಗಳು ಉನ್ನತ ಶ್ರೇಣಿ, 16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಹಾಗೂ 9 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ವಿದ್ಯಾರ್ಥಿನಿ ಯಲ್ಲಮ್ಮ ಶಿವಾನಂದ ಹುಲ್ಲೂರು ಶೇ 91.52 ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಪ್ರೀತಂ ಮಾರುತಿರಾವ ಬೆನಕಟ್ಟಿ ಶೇ 89.44 ಪಡೆದು ದ್ವಿತೀಯ ಸ್ಥಾನ ಹಾಗೂ ದರ್ಶನ ನರಸಪ್ಪ ಗೌಳಿ ಶೇ 84.80 ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ಸೌಮ್ಯ ಅಮರೇಗೌಡ ನಾಗೂರ ಶೇ 82.08 ಅಂಕ ಪಡೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಮುಪ್ಪಿನ ಬಸವಲಿಂಗ ಸ್ವಾಮೀಜಿ, ಆಡಳಿತ ಅಧ್ಯಕ್ಷ ಸಂಗಯ್ಯ ವಸ್ತ್ರದ, ಉಪಾಧ್ಯಕ್ಷ ಶ್ರೀಶೈಲಪ್ಪ ಮೋಟಗಿ, ಕಾರ್ಯದರ್ಶಿ ಮಲ್ಲಯ್ಯ ಕೋಮಾರಿ ಹಾಗೂ ನಿರ್ದೇಶಕ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಮುಖ್ಯಶಿಕ್ಷಕ ಮತ್ತು ಸಿಬ್ಬಂದಿಯು ವಿದ್ಯಾರ್ಥಿಗಳ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-35-1880934408

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.