ಹನುಮಸಾಗರ: ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ನ ಸರ್ಕಾರಿ ಪ್ರೌಢಶಾಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 96.37 ಫಲಿತಾಂಶ ದಾಖಲಿಸಿದೆ. 12 ವರ್ಷಗಳ ಬಳಿಕ ಶಾಲೆ ಅತ್ಯುತ್ತಮ ಫಲಿತಾಂಶ ದಾಖಲಿಸಿದೆ.

ಪರೀಕ್ಷೆಗೆ ಹಾಜರಾದ 193 ವಿದ್ಯಾರ್ಥಿನಿಯರ ಪೈಕಿ 186 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದು, ಶಾಲೆ ಶೈಕ್ಷಣಿಕ ಸಾಧನೆಗೆ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ. ಅವರಲ್ಲಿ 34 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿ, 95 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿ, 31 ವಿದ್ಯಾರ್ಥಿನಿಯರು ದ್ವಿತೀಯ ಶ್ರೇಣಿ ಹಾಗೂ 26 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ.

ವಿದ್ಯಾರ್ಥಿನಿ ಸಬಾ ಬೇಗಂ ಮಣಿಯಾರ ಶೇ 96.80 ಅಂಕಗಳಿಂದ ಪ್ರಥಮ ಸ್ಥಾನ ಪಡೆದರೆ, ನವ್ಯಶ್ರೀ ಹಲಗಿಹೊಲದ ಶೇ 96.24 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಮತ್ತು ವೀಕ್ಷಾ ಬೆನಕಟ್ಟಿ ಶೇ 94.56 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.

ಕನ್ನಡ ವಿಷಯದಲ್ಲಿ ಮೂವರು ವಿದ್ಯಾರ್ಥಿನಿಯರು 125ಕ್ಕೆ 125 ಅಂಕ ಗಳಿಸಿದ್ದು, ಇಂಗ್ಲಿಷ್ನಲ್ಲಿ ನಾಲ್ವರು, ಹಿಂದಿಯಲ್ಲಿ 8 ಹಾಗೂ ಸಮಾಜ ವಿಜ್ಞಾನದಲ್ಲಿ 10 ವಿದ್ಯಾರ್ಥಿನಿಯರು 100ಕ್ಕೆ 100 ಅಂಕ ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಮುಖ್ಯಶಿಕ್ಷಕ ಶರಣಪ್ಪ ಗುಳೇದ ಹಾಗೂ ಶಿಕ್ಷಕರು ಹರ್ಷ ವ್ಯಕ್ತಪಡಿಸಿ, ಅಭಿನಂದಿಸಿದ್ದಾರೆ. ಎಸ್ಡಿಎಂಸಿ ಉಪಾಧ್ಯಕ್ಷರು ಹಾಗೂ ಸದಸ್ಯರು ಸಾಧನೆಯನ್ನು ಶ್ಲಾಘಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-35-1568936054

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.