ಹರಪನಹಳ್ಳಿ: ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಹರಪನಹಳ್ಳಿ ತಾಲ್ಲೂಕಿಗೆ ಶೇ 96.33ರಷ್ಟು ಫಲಿತಾಂಶ ಲಭಿಸಿದೆ.

ತಾಲ್ಲೂಕಿನ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲೆಗಳಿಂದ ಒಟ್ಟು 3,830 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅವರಲ್ಲಿ 3,693 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ತಾಲ್ಲೂಕು ಶೇ 96.33 ರಷ್ಟು ಫಲಿತಾಂಶವನ್ನು ದಾಖಲಿಸಿದೆ.

ತಾಲ್ಲೂಕಿನ ಒಟ್ಟು 24 ಶಾಲೆಗಳು ಶೇ 100 ರಷ್ಟು ಫಲಿತಾಂಶ ಪಡೆದಿವೆ. ಇದರಲ್ಲಿ 6 ಸರ್ಕಾರಿ ಪ್ರೌಢಶಾಲೆಗಳು, 7 ಸರ್ಕಾರಿ ವಸತಿ ಶಾಲೆಗಳು, 3 ಅನುದಾನಿತ ಹಾಗೂ 8 ಅನುದಾನ ರಹಿತ ಶಾಲೆಗಳು ಸೇರಿವೆ.

ತಾಲ್ಲೂಕಿನ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು 600ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ.

ಕೆ.ಸಿ.ಎ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಪ್ರಾಂಜಲ ಬಿ ಶೇ.99.68 ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅದೇ ಶಾಲೆ ವಿದ್ಯಾರ್ಥಿನಿ ವಿ.ಎಚ್.ಸುರಭಿ ಶೇ.99.36 ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ತಾಲ್ಲೂಕಿನ ಅನಂತನಹಳ್ಳಿ ಸರ್ಕಾರಿ ಆದರ್ಶ ವಿದ್ಯಾಲಯ ಜಯಶ್ರೀ ಎನ್.ಎಂ ಹಾಗೂ ನಗರದ ವಿ.ಎಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಅನುಪಮಾ ಬಿ.ಕೆ ತಲಾ ಶೇ.99.2 ಅಂಕ ಪಡೆದು ಜಿಲ್ಲಾ ಮಟ್ಟದಲ್ಲಿ ಮೂರನೇ ಸ್ಥಾನ ಹಂಚಿಕೊಂಡಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-25-121209666

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.