ಹಾಸನ: ಎಸ್.ಎಸ್.ಎಲ್.ಸಿ. ಪರೀಕ್ಷೆ-2 ಜಿಲ್ಲೆ 8 ಪರೀಕ್ಷಾ ಕೇಂದ್ರಗಳಲ್ಲಿ ಮೇ 18ರಿಂದ ಮೇ 23ರ ವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ನಡೆಯಲಿವೆ.

ಅಭ್ಯರ್ಥಿಗಳು ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಬರಬೇಕು. ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕು. ಪ್ರವೇಶ ಪತ್ರ ಮತ್ತು ಅಗತ್ಯ ಲೇಖನ ಸಾಮಗ್ರಿಗಳೊಂದಿಗೆ ಹಾಜರಾಗಬೇಕು. ವಿಶೇಷಚೇತನ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, ಅವಶ್ಯಕತೆ ಇರುವ, ಸೂಕ್ತ ದಾಖಲೆಗಳೊಂದಿಗೆ ಕೋರಿಕೆ ಮೇರೆಗೆ ಹೆಚ್ಚುವರಿ ಕಾಲಾವಕಾಶ ನೀಡಿದೆ.ಸಹಾಯಕ ಬರಹಗಾರರ ಸೌಲಭ್ಯಕ್ಕೆ ಕೋರಿರುವವರು ಒಂದು ದಿನ ಮುಂಚಿತವಾಗಿ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಭೇಟಿ ಮಾಡಿ ವಿವರ ಸಲ್ಲಿಸಬೇಕು. ಪರೀಕ್ಷೆಯಲ್ಲಿ ಅವ್ಯವಹಾರ ನಡೆಸಿದಲ್ಲಿ ಶಿಸ್ತುಕ್ರಮಕ್ಕೆ ಒಳಪಡಿಸಲಾಗುವುದು. ಪರೀಕ್ಷಾ ಕೊಠಡಿಗೆ ಪರೀಕ್ಷೆಗೆ ಸಂಬಂಧಿಸದ ಯಾವುದೇ ಸಾಮಗ್ರಿಗಳನ್ನು ಒಯ್ಯುವಂತಿಲ್ಲ. ಪರೀಕ್ಷೆ ಕೇಂದ್ರದಲ್ಲಿ ಪ್ರತಿ ಕೊಠಡಿಗೆ ಸಿಸಿಟಿವಿ ವ್ಯವಸ್ಥೆ ಮಾಡಲಾಗಿದೆ ಎಂದು ಡಿಡಿಪಿಐ ಬಲರಾಂ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-36-168801479

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.