ಹೊನ್ನಾಳಿ: ‘ಪಟ್ಟಣದ ಹಿರೇಕಲ್ಮಠದ ಸಮುದಾಯ ಭವನದಲ್ಲಿ ಜೂನ್ 28ರಂದು ಎಸ್ಎಸ್ಎಲ್ಸಿ ಹಾಗೂ ಪಿಯುಸಿಯಲ್ಲಿ ಶೇ 85ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರೇರಣೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ’ ಎಂದು ಇನ್ಸೈಟ್ಸ್ ಐಎಎಸ್ ಅಕಾಡೆಮಿ ಸಂಸ್ಥಾಪಕ ನಿರ್ದೇಶಕ ಜಿ.ಬಿ. ವಿನಯಕುಮಾರ್ ಹೇಳಿದರು.

‘ಕಳೆದ ವರ್ಷ ಶೇ 90ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ₹1,000 ನಗದು, ಸ್ಮರಣಿಕೆ ನೀಡಿ ಸನ್ಮಾನಿಸಲಾಗಿತ್ತು. ಈ ಬಾರಿ ಶೇ 85ಕ್ಕಿಂತ ಹೆಚ್ಚು ಅಂಕ ಪಡೆದ ಎಲ್ಲ ಸಮುದಾಯಗಳ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು. ಈ ಬಾರಿಯೂ ₹1,000 ನಗದು, ಸ್ಮರಣಿಕೆ ನೀಡಲಾಗುವುದು’ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಎಸ್ಎಸ್ಎಲ್ಸಿ ಹಾಗೂ ಪಿಯುಸಿ ನಂತರ ಮುಂದೇನು? ಎನ್ನುವ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುವುದು. ಈ ಹಂತದಲ್ಲಿಯೇ ಐಎಎಸ್, ಐಪಿಎಸ್ನಂತಹ ಸ್ಮರ್ಧಾತ್ಮಕ ಪರೀಕ್ಷೆಗಳ ಕುರಿತು ಆಸಕ್ತಿ ಬೆಳೆಸುವ ಹಾಗೂ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಕುರಿತು ಮಾಹಿತಿ ನೀಡಲಾಗುವುದು. ವಿದ್ಯಾರ್ಥಿಗಳ ಜೊತೆಗೆ ಪೋಷಕರು ಆಗಮಿಸಬೇಕು’ ಎಂದು ಮನವಿ ಮಾಡಿದರು.

‘ಈಗಾಗಲೇ 120 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಸಂಖ್ಯೆ 400ಕ್ಕೆ ಹೆಚ್ಚುವ ಅಂದಾಜಿದೆ. ಜೂನ್ 15ರೊಳಗಾಗಿ ವಿದ್ಯಾರ್ಥಿಗಳು ತಮ್ಮ ಹೆಸರು, ಪೋಷಕರ ಹೆಸರು, ಅಂಕಪಟ್ಟಿ ಹಾಗೂ ಭಾವಚಿತ್ರದೊಂದಿಗೆ ಈ ಕೆಳಕಂಡವರನ್ನು ಸಂಪರ್ಕಿಸಬಹುದು’ ಎಂದು ಮನವಿ ಮಾಡಿದರು.

ರಾಜು ಕಣಗಣ್ಣಾರ್ ಮೊ: 8073362266, ಪಂಕಜಾಕ್ಷಿ 9886628687, ನಾಗೇಶ್ ಗಂಜಿನಹಳ್ಳಿ 7892229504, ಸಂದೀಪ್ ನ್ಯಾಮತಿ 8095446750, ಕರೀಂ ಸಾಸ್ವೆಹಳ್ಳಿ 8197069136, ಅಯ್ಯಣ್ಣ 9353460054.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-43-1787339965

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.