ಹೊಸದುರ್ಗ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ ಎಂದು ಶಾಸಕ ಬಿ.ಜಿ .ಗೋವಿಂದಪ್ಪ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗದ) ಆವರಣದಲ್ಲಿ ಈಚೆಗೆ ಆಯೋಜಿಸಿದ್ದ ಸಾಧಕರಿಗೆ ಸತ್ಕಾರ ಹಾಗೂ ಶಾಸಕರಿಂದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಈ ಬಾರಿ ಬಿಇಒ ಜೊತೆ ಇತರೆ ಶಿಕ್ಷಕರು ಪ್ರತಿ ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸುವ ಮೂಲಕ ಉತ್ತಮ ಫಲಿತಾಂಶ ನೀಡಿದ್ದಾರೆ. ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಅನುದಾನಸಹಿತ ಶಾಲೆಗಳಲ್ಲಿ ನ್ಯೂನತೆಗಳು ಇದ್ದಲ್ಲಿ ಪರಿಹಾರ ಕಂಡುಕೊಳ್ಳಬೇಕು. ಯಾವುದೇ ವಿದ್ಯಾರ್ಥಿಗಳಿಗೂ ಅನ್ಯಾಯ ಆಗಬಾರದು ಎಂದು ಸೂಚನೆ ನೀಡಿದರು.

ಮರುಪರೀಕ್ಷೆಯಲ್ಲಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ತೀರ್ಣರಾಗಬಹುದು. ನಂತರ ತಾಲ್ಲೂಕಿಗೆ ಶೇ 94 ಫಲಿತಾಂಶ ಬರುವ ನಿರೀಕ್ಷೆಯಿದೆ ಎಂದು ಬಿಇಒ ಸೈಯದ್ ಮೋಸಿನ್ ಭರವಸೆ ವ್ಯಕ್ತಪಡಿಸಿದರು. ಬಿ.ಆರ್.ಸಿ ಶ್ರೀನಿವಾಸ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಾಂತಪ್ಪ, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಗುರುಮೂರ್ತಿ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಆರ್. ಶಾಂತಪ್ಪ, ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ನಾಗೇಂದ್ರಪ್ಪ, ಪ್ರೌಢಶಾಲೆಯ ಸಹ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಕಾಶ್, ಡಯಟ್ ಉಪನ್ಯಾಸಕ ಶಂಕರ್ ನಾಯ್ಕ ಸೇರಿದಂತೆ ಎಲ್ಲಾ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-44-1530248640

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.