ಹುಬ್ಬಳ್ಳಿ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದಕ್ಕೆ ಖುಷಿಯಾಗಿದೆ. ಪಿಯುಸಿಯಲ್ಲಿ ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕು ಅಂದುಕೊಂಡಿದ್ದೇನೆ ಎಂದು ನಗರದ ಚೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಅಪೇಕ್ಷಾ ಪಾಟೀಲ ಹೇಳಿದಳು.

‘ಶಿಕ್ಷಕರು, ತಂದೆ ತಾಯಿಯ ಮಾರ್ಗದರ್ಶನದಿಂದ ಹೆಚ್ಚು ಅಂಕ ಗಳಿಸಲು ಸಾಧ್ಯವಾಯಿತು. ಪರೀಕ್ಷೆಗೆ ವಿಶೇಷ ಸಿದ್ಧತೆ ಮಾಡಿಕೊಂಡಿರಲಿಲ್ಲ. ದಿನಕ್ಕೆ ಐದಾರು ಗಂಟೆ ಓದುತ್ತಿದ್ದೆ. ಓದಿದ್ದನ್ನು ಮನನ ಮಾಡಿಕೊಳ್ಳಲು ಹೆಚ್ಚು ಒತ್ತು ಕೊಡುತ್ತಿದ್ದೆ. ಗೊಂದಲವಾದಾಗ ತಕ್ಷಣ ಪರಿಹರಿಸಿಕೊಳ್ಳುತ್ತಿದ್ದೆ. ಟ್ಯೂಷನ್ಗೆ ಹೋಗಿಲ್ಲ’ ಎಂದು ಅಪೇಕ್ಷಾ ಹೇಳಿದಳು.

ಗಣಿತ ಮತ್ತು ವಿಜ್ಞಾನ ನನ್ನ ಇಷ್ಟದ ವಿಷಯಗಳಾಗಿದ್ದವು. ಅವುಗಳಲ್ಲಿ ಉತ್ತಮ ಅಂಕಗಳು ಬಂದಿವೆ. ಹಳೆಯ ಪ್ರಶ್ನೆಪತ್ರಿಕೆಗಳನ್ನು ಬಿಡಿಸಿದ್ದರಿಂದಲೂ ಅನುಕೂಲವಾಯಿತು ಎಂದಳು.

ಅಪೇಕ್ಷಾಳ ತಂದೆ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಸಿದ್ಧಾರೂಢ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿದ್ದು, ತಾಯಿ ಗೃಹಿಣಿ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-24-1282496739

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.