ಹುಕ್ಕೇರಿ: ಸ್ಥಳೀಯ ಸಿ.ಎಸ್. ತುಬಚಿ ಶಿಕ್ಷಣ ಸಂಸ್ಥೆಯ ಎಸ್.ಕೆ. ಪಬ್ಲಿಕ್ (ಸಿಬಿಎಸ್ಇ) ಸ್ಕೂಲ್ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಸತತ ಎರಡನೇ ಬಾರಿಯೂ ತಾಲ್ಲೂಕಿಗೆ ಪ್ರಥಮ ಸ್ಥಾನ ಉಳಿಸಿಕೊಂಡಿದೆ ಎಂದು ಅಧ್ಯಕ್ಷ ಪಿಂಟು ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಶಾಂಕ ಆರೇರ್ ಸಿಬಿಎಸ್ಇ ಪರೀಕ್ಷೆಯಲ್ಲಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾನೆ. ಶಶಾಂಕ್ ಆರೇರ್ ಶೇ 96 ಪ್ರಥಮ, ಸ್ಪಂದನಾ ಗೋಣಿ ಶೇ 95.2 ದ್ವಿತೀಯ, ಕಾಂತೇಶ ಬಿಲ್ಲೂರ ಶೇ 91.6 ತೃತೀಯ, ಸಮರ್ಥ್ ಸಿಂಗ್ ರಜಪೂತ ಶೇ 90.6 ನಾಲ್ಕನೇ ಮತ್ತು ಮಲ್ಲಿಕಾರ್ಜುನ ಗಂಧ ಶೇ 89.2 ಅಂಕ ಪಡೆದು ಐದನೇ ಸ್ಥಾನ ಪಡೆದಿದ್ದಾರೆ.

ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳಲ್ಲಿ ಶೇ 37 ರಷ್ಟು ಅತ್ಯುನ್ನತ ಶ್ರೇಣಿಯಲ್ಲಿ, ಶೇ 80 ರಷ್ಟು ಫಸ್ಟ್ ಕ್ಲಾಸ್ ನಲ್ಲಿ (ಪ್ರಥಮ ದರ್ಜೆಯಲ್ಲಿ) ಉತ್ತೀರ್ಣರಾಗಿದ್ದಾರೆ. ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷ ಅಣ್ಣು ಶೆಟ್ಟಿ, ಪ್ರಾಚಾರ್ಯ ರಾಘವೇಂದ್ರ ಕುಲಕರ್ಣಿ ಮತ್ತು ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-21-116442570

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.