ಹುಮನಾಬಾದ್: ‘ಶಾಲೆಯ ಶಿಕ್ಷಕರ ಸತತ ಪ್ರಯತ್ನದಿಂದ ಆದಿತ್ಯ ಸಂತೋಷ್ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 99.36 ಅಂಕಗಳನ್ನು ಪಡೆದು ರಾಜ್ಯಕ್ಕೆ 5 ಸ್ಥಾನ ಪಡೆದು ಶಾಲೆ ಮತ್ತು ತಾಲ್ಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ’ ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ ಹೇಳಿದರು.

ಪಟ್ಟಣದ ಗೃಹ ಕಚೇರಿಯಲ್ಲಿ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದ್ದು, ಹೀಗಾಗಿ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಸಂಸ್ಕಾರ ಪಡೆದು ನಿರಂತರವಾಗಿ ಅಧ್ಯಯನ ಮಾಡಿ ಸಾಧನೆಯ ಗುರಿ ಮುಟ್ಟಬೇಕು’ ಎಂದರು.

ಈ ಸಂದರ್ಭದಲ್ಲಿ ಮಹಾದೇವ ಹಿರಸ್ಕರ್, ಶಾರದಾ ಸುರೇಶ್ ಕುಂಬಾರ, ಅನೀತಾ ಕುಲಕರ್ಣಿ, ಕಲ್ಪನಾ ಶಾಹಪುರೆ, ಶಾಂತಕುಮಾರ್, ಈರಮ್ಮಾ, ಗುರುರಾಜ್, ಶರಣು, ಗೀತಾ ಸೇರಿದಂತೆ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-33-1217955904

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.