ಹುಮನಾಬಾದ್: ‘ಟೋಕರೆ ಕೋಳಿ ಸಮಾಜದ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ 80ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮೆ 16ರಂದು ಸನ್ಮಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ’ ಎಂದು ಅಖಿಲ ಭಾರತೀಯ ಟೋಕರೆ ಕೋಳಿ ಸಮಾಜದ ತಾಲ್ಲೂಕು ಯುವ ಘಟಕದ ಅಧ್ಯಕ್ಷ ದಯಾನಂದ ಮೇತ್ರಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಹುಮನಾಬಾದ್ ವಿಧಾನ ಸಭಾ ಕ್ಷೇತ್ರದಲ್ಲಿನ ಸಮಾಜದ ಹೆಚ್ಚು ಅಂಕ ಪಡೆದ ಐದು ವಿದ್ಯಾರ್ಥಿಗಳಿಗೆ ಬೆಳ್ಳಿ ಪದಕ ಮತ್ತು ಶೇ 80ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಬಡ್ತಿ ಹಾಗೂ ನಿವೃತ್ತ ಸರ್ಕಾರಿ ನೌಕರರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.

ತಾಲ್ಲೂಕು ಅಧ್ಯಕ್ಷ ಶರಣು ಕಂದಗೋಳ ಮಾತನಾಡಿ, ‘ಬಸವಕಲ್ಯಾಣದ ನಿಜ ಶರಣ ಅಂಬಿಗರ ಚೌಡಯ್ಯ ಜಾಗೃತಿ ಆಶ್ರಮದ ರತ್ನಕಾಂತ ಶಿವಯೋಗಿ ಸ್ವಾಮೀಜಿ ಸಾನ್ನಿಧ್ಯ, ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಅಂಜುಂ ತಬಸುಮ್, ಡಿವೈಎಸ್ಪಿ ಮಡೋಳಪ್ಪ ಪಿ.ಎಸ್., ಬಿಇಒ ವೆಂಕಟೇಶ್ ಗೂಡಾಳ್ ಭಾಗವಹಿಸುವವರು. ಹೀಗಾಗಿ ಕಾರ್ಯಕ್ರಮದಲ್ಲಿ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾಧ್ಯಕ್ಷ ಅಶೋಕ್ ಹಣಕುಣಿ, ಗೌರವಾಧ್ಯಕ್ಷ ಅನೀಲ ಪಲ್ಲಹರಿ, ಯುವ ಘಟಕದ ಗೌರವಾಧ್ಯಕ್ಷ ರಾಜಕುಮಾರ್ ಡೆಬ್ಬಿ, ಉಪಾಧ್ಯಕ್ಷ ಸಿದ್ದಲಿಂಗ ಅಯ್ಯನೋರ್, ಸುದಮ್ ಗಂಟಿ, ಆಜ್ಞೆಶ್ ನಲ್ಲೆ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-33-1858458586

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.