ಕೂಡಲಸಂಗಮ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹುನಗುಂದ ತಾಲ್ಲೂಕು ಶೇ 96.44 ಫಲಿತಾಂಶ ಪಡೆಯುವ ಮೂಲಕ ಜಿಲ್ಲೆಯಲ್ಲಿ 2ನೇ ಸ್ಥಾನ ಪಡೆದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮೀನ್ ಕಿಲ್ಲೇದಾರ ಹೇಳಿದರು.

ಶನಿವಾರ ಕೂಡಲಸಂಗಮ ಸರ್ಕಾರಿ ಪ್ರೌಢಶಾಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಹುನಗುಂದ-ಇಲಕಲ್ಲ ಅವಳಿ ತಾಲ್ಲೂಕಿನಲ್ಲಿ 16 ಪರೀಕ್ಷಾ ಕೇಂದ್ರದಲ್ಲಿ 5, 085 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 4,904 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶಿಕ್ಷಕರ ನಿರಂತರ ಪರಿಶ್ರಮದಿಂದ ಉತ್ತಮ ಫಲಿತಾಂಶ ಬಂದಿದೆ.

ಇಲಕಲ್ಲ ವಿಜಯ ಮಹಾಂತೇಶ ಪ್ರೌಢಶಾಲೆಯ ವಿದ್ಯಾರ್ಥಿ ಐಶ್ವರ್ಯ ಪ್ಯಾಟಿಗೌಡರ ಶೇ 98.88 ಅಂಕ ಪಡೆದು ತಾಲ್ಲೂಕಿಗೆ ಪ್ರಥಮ, ಇಲಕಲ್ಲ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ಪವಿತ್ರಾ ಅಮೀನಪ್ಪ ಕುರಿ ಶೇ 98.72, ಅಮೀನಗಡ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಯ ಸಂತೋಷ ಸಿದ್ದಪ್ಪ ಶಿರೂರ ಶೇ 98.72 ದ್ವಿತೀಯ, ಪೂಜಾ ಪರಸಪ್ಪ ಗರಗದ ಶೇ 98.56 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ಕೂಡಲಸಂಗಮ ಸರ್ಕಾರಿ ಪ್ರೌಢಶಾಲೆಯು ಉತ್ತಮ ಫಲಿತಾಂಶ ಪಡೆದಿದೆ.

ಅವಳಿ ತಾಲೂಕಿನಲ್ಲಿ 17 ಸರ್ಕಾರಿ, 8 ಅನುದಾನಿತ, 12 ಅನು ದಾನ ರಹಿತ ಪ್ರೌಢಶಾಲೆಗಳು ಶೇ 100ರಷ್ಟು ಫಲಿತಾಂಶ ಪಡೆದಿವೆ. ತಾಲ್ಲೂಕಿಗೆ ಬಂದ ಐಶ್ವರ್ಯ ಪ್ಯಾಟಿಗೌಡ ಅವರನ್ನು ಇಲಾಖೆಯಿಂದ ಸನ್ಮಾನಿಸಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-19-1946352967

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.