ಹುಣಸೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ತಾಲ್ಲೂಕು 9ನೇ ಸ್ಥಾನಕ್ಕೆ ಕುಸಿತ ಕಂಡಿದೆ. ಕಳೆದ ಬಾರಿ 7ನೇ ಸ್ಥಾನದಲ್ಲಿತ್ತು. 3,767 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 3,432 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 335 ವಿದ್ಯಾರ್ಥಿಗಳು ಅನುತೀರ್ಣರಾಗಿದ್ದಾರೆ. ಸರ್ಕಾರಿ ಆದರ್ಶ ಪ್ರೌಢಶಾಲೆಯ ವಿದ್ಯಾರ್ಥಿ ನಿರೀಕ್ಷಾ ಎಚ್.ಜೆ. 614 ಅಂಕಪಡೆದು ಸರ್ಕಾರಿ ಶಾಲೆಗಳಲ್ಲಿ ಅತ್ಯಂತ ಹೆಚ್ಚು ಅಂಕಪಡೆದ ವಿದ್ಯಾರ್ಥಿಯಾಗಿ ಹೊರ ಹೊಮ್ಮಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ್ ಪಿ. ತಿಳಿಸಿದರು.

ಶೇ 100 ಫಲಿತಾಂಶ: ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರೌಢಶಾಲೆಗಳಲ್ಲಿ ಸರ್ಕಾರಿ ಶಾಲೆ ಚಿಲ್ಕುಂದ, ಹರವೆ ಗ್ರಾಮದ ಕಿತ್ತೂರು ರಾಣಿ ವಸತಿ ಶಾಲೆ, ಸಬ್ಬನಹಳ್ಳಿ ಮುರಾರ್ಜಿ ವಸತಿ ಶಾಲೆ, ಹನಗೋಡು ಗ್ರಾಮದ ಅಂಬೇಡ್ಕರ್ ವಸತಿ ಶಾಲೆ ಸೇರಿದಂತೆ ಅನುದಾನ ರಹಿತ ಶಾಲೆಗಳಲ್ಲಿ ಬಿ.ಜಿ.ಎಸ್ ಪ್ರೌಢಶಾಲೆ ಮತ್ತು ಗದ್ದಿಗೆ ಗ್ರಾಮದ ಕಾರ್ಮಲ್ ಜ್ಯೋತಿ ಶಾಲೆ ಸಾಧನೆ ಮಾಡಿದೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-38-1463878729

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.