ಕಡೂರು: ಕಡೂರು ಶೈಕ್ಷಣಿಕ ವಲಯದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 90.48 ದಾಖಲೆಯ ಫಲಿತಾಂಶ ಬಂದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ 23 ಫಲಿತಾಂಶ ವೃದ್ಧಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ತಿಮ್ಮಯ್ಯ ತಿಳಿಸಿದರು.

ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಅವರು ಮಾತನಾಡಿದರು.

ವೇದಾವತಿ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿನಿ ಚೇತನಾ ಎಚ್.ಜಿ. 617 ಅಂಕ ಗಳಿಸಿ ತಾಲ್ಲೂಕಿಗೆ ಮೊದಲ ಸ್ಥಾನ, ಹೈವೇ ಇಂಗ್ಲಿಷ್ ಸ್ಕೂಲ್ನ ಪೃಥ್ವಿ ಕೆ. ಪ್ರಶಾಂತ್ 616 ಅಂಕ ಗಳಿಸಿ ದ್ವಿತೀಯ, ಇದೇ ಶಾಲೆಯ ಸನ್ನಿಧಿ ವಿ. 614 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾರೆ. 602 ಅಂಕ ಗಳಿಸಿದ ಪಟ್ಟಣದ ಸರ್ಕಾರಿ ಬಾಲಿಕಾ ಪ್ರೌಢಶಾಲೆಯ ಸ್ನೇಹಾ ಆರ್. ಅವರನ್ನು ಮತ್ತು ಪೋಷಕರನ್ನು ಸನ್ಮಾನಿಸಿ, ಸಿಹಿ ಹಂಚಿದರು.

15 ಸರ್ಕಾರಿ ಪ್ರೌಢಶಾಲೆಗಳಲ್ಲಿ 7 ಶಾಲೆಗಳು ಶೇ 100 ಫಲಿತಾಂಶ ಪಡೆದಿವೆ. ಕ್ಷೇತ್ರದ 7 ಮೊರಾರ್ಜಿ ವಸತಿ ಶಾಲೆಗಳಲ್ಲೂ ಶೇ 100 ಫಲಿತಾಂಶ ಬಂದಿದೆ. ಅನುದಾನ ರಹಿತ 15 ಶಾಲೆಗಳು, ಅನುದಾನಿತ ಶಾಲೆಗಳು 26 ಇದ್ದು, ಇವುಗಳ ಒಟ್ಟಾರೆ ಫಲಿತಾಂಶ ಶೇ 85.33 ಆಗಿದೆ ಎಂದು ಅವರು ತಿಳಿಸಿದರು.

ಇಸಿಒ ಕೃಷ್ಣಮೂರ್ತಿ ಬಿ.ಎಸ್., ನಾಗರಾಜು ಕೆ.ಡಿ, ಮತ್ತು ಶಿಕ್ಷಕ ಪ್ರಶಾಂತ್ ಹಾಗೂ ಪೋಷಕರು, ಮಕ್ಕಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-126-1194231096

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.