ಸೇಡಂ: ‘ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, 35 ಶೈಕ್ಷಣಿಕ ಜಿಲ್ಲೆಗಳ ಪೈಕಿ ಕಲಬುರಗಿ ಕಟ್ಟಕಡೆಯ 35ನೇ ಸ್ಥಾನ ಪಡೆದಿದೆ. ಶಿಕ್ಷಣ ಸುಧಾರಣೆಗೆ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಆಸಕ್ತಿ ಇಲ್ಲ ಎಂಬುದು ಕಾಣುತ್ತಿದೆ’ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ ಗುತ್ತೇದಾರ ಆರೋಪಿಸಿದ್ದಾರೆ.

‘ಶಿಕ್ಷಕರ ಕೊರತೆಯು ಫಲಿತಾಂಶ ಪ್ರಮಾಣ ಕುಸಿಯಲು ಮುಖ್ಯ ಕಾರಣವಾಗಿದ್ದು, ಶಿಕ್ಷಣ ಸುಧಾರಣೆಗೆ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಆಸಕ್ತಿಯಿಲ್ಲ ಎಂಬುದು ಫಲಿತಾಂಶ ಸಾಬಿತುಪಡಿಸುತ್ತಿದೆ. ಒಂದು ವೇಳೆ ಇಚ್ಛಾಶಕ್ತಿ ಇದ್ದರೆ ಕಲಬುರಗಿ ಜಿಲ್ಲೆ ಕೊನೆ ಸ್ಥಾನದಲ್ಲಿ ಇರುತ್ತಿರಲಿಲ್ಲ. ‘ಈ ಭಾಗದ ಜನಪ್ರತಿನಿಧಿಗಳು ಸಂಬಂಧವಿಲ್ಲದ ವಿಷಯಗಳನ್ನೆಲ್ಲ ಮಾತನಾಡುತ್ತಾರೆ. ಪ್ರಮುಖವಾಗಿ ಶೈಕ್ಷಣಿಕ ಸಮಸ್ಯೆಗಳ ಕುರಿತಾಗಿ ಧ್ವನಿ ಎತ್ತಿದ್ದೇ ಅಪರೂಪ. ಬರೀ ಬಾಯಿ ಮಾತಲ್ಲಿ ಶಿಕ್ಷಣ ಕ್ಷೇತ್ರ ಸುಧಾರಣೆ ಆಗಬೇಕು ಎಂದರೆ ಸಾಲದು. ಆಡಳಿತಾತ್ಮಕವಾಗಿ ಏನಾದರೂ ಬದಲಾವಣೆಗೆ ನಾಂದಿ ಹಾಡಬೇಕು. ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಬೇಕು, ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಯತ್ತ ಗಮನ ಹರಿಸಬೇಕು’ ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-31-1025632208

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.