ಕಲಬುರಗಿ: ಜಿಲ್ಲೆಯ ಸರ್ಕಾರಿ ಶಾಲೆಗಳು ಈ ಬಾರಿ ಅತ್ಯುತ್ತಮ ಫಲಿತಾಂಶ ದಾಖಲಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿವೆ. ರಾಜ್ಯದಲ್ಲೇ ಅತಿ ಹೆಚ್ಚು ಸುಧಾರಣೆ ಕಂಡ 2ನೇ ಜಿಲ್ಲೆಯಾಗಿ ಕಲಬುರಗಿ ಹೊರಹೊಮ್ಮಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಹೊಸ ಸಭಾಂಗಣದಲ್ಲಿ ಮಂಗಳವಾರ 2025–26ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಜಿಲ್ಲಾವಾರು ಮತ್ತು ತಾಲ್ಲೂಕುವಾರು ಉತ್ತಮ ಸಾಧನೆ ತೋರಿದ ಎಲ್ಲ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

‘ಈ ಸಲ ಜಿಲ್ಲೆಯ ಒಟ್ಟು 109 ಶಾಲೆಗಳು ಶೇ100ರಷ್ಟು ಫಲಿತಾಂಶ ದಾಖಲಿಸಿವೆ. ಅದರಲ್ಲಿ 61 ಸರ್ಕಾರಿ ಶಾಲೆಗಳಾಗಿರುವುದು ವಿಶೇಷ. ಜಿಲ್ಲೆಯ ಶೈಕ್ಷಣಿಕ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಅಭೂತಪೂರ್ವ ಬದಲಾವಣೆಯೊಂದು ನಡೆದಿದೆ. 2024–25ನೇ ಸಾಲಿನ ಪರೀಕ್ಷೆ–1ರಲ್ಲಿ ಜಿಲ್ಲೆಯು ಶೇ 42.43ರಷ್ಟು ಫಲಿತಾಂಶ ಪಡೆದಿತ್ತು. 2025–26ನೇ ಸಾಲಿನಲ್ಲಿ ಬರೋಬ್ಬರಿ ಶೇ 85.06ರಷ್ಟು ಫಲಿತಾಂಶ ಗಳಿಸಿದೆ. ಫಲಿತಾಂಶದಲ್ಲಿ ದಾಖಲೆಯ ಶೇ42.63ರಷ್ಟು ಚೇತರಿಕೆ ಕಂಡಿದೆ’ ಎಂದರು.

‘ರಾಜ್ಯ ಸರಾಸರಿಯ ಜೊತೆ ಹೋಲಿಸಿದರೆ ಜಿಲ್ಲೆಯ ಫಲಿತಾಂಶದಲ್ಲಿನ ವ್ಯತ್ಯಾಸವನ್ನು ಗಮನಾರ್ಹವಾಗಿ ತಗ್ಗಿಸಲಾಗಿದೆ. ಈ ಅಭಿವೃದ್ಧಿಯ ಹಿಂದೆ ಶಿಕ್ಷಕರ, ಅಧಿಕಾರಿಗಳ ಹಾಗೂ ವಿದ್ಯಾರ್ಥಿಗಳ ಶ್ರಮವಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡುವ ಗುರಿ ಹೊಂದಲಾಗಿದೆ’ ಎಂದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕ ಬಸವರಾಜ ಶೆಟ್ಟಿ, ಡಿಡಿಪಿಐ ಶಂಕ್ರಮ್ಮ ಢವಳಗಿ ಹಾಗೂ ಪ್ರೌಢಶಾಲಾ ಮುಖ್ಯಶಿಕ್ಷಕರು, ವಿವಿಧ ಬಿಇಒಗಳು ಹಾಗೂ ಶಿಕ್ಷಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-34-1443105167

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.