ಕಲಬುರಗಿ: ಕಲ್ಯಾಣ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಿಲೇನಿಯಂ ಕನ್ನಡ ಮಾಧ್ಯಮ ಶಾಲೆಗೆ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ–1ರಲ್ಲಿ ಶೇ 100ರಷ್ಟು ಫಲಿತಾಂಶ ಬಂದಿದೆ.

ಆಂಗ್ಲ ಮಾಧ್ಯಮ ಶಾಲೆಗೆ ಶೇ 95.93ರಷ್ಟು ಫಲಿತಾಂಶ ಬಂದಿರುತ್ತದೆ. ಆಂಗ್ಲ ಮಾಧ್ಯಮದಲ್ಲಿ ಶೇ 97.92 ಅಂಕ ಪಡೆದ ಮಹಾದೇವಿ ಶರಣು ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಸಂಗಮೇಶ ನಾಗರಾಜ ಮತ್ತು ವಿಜಯಕುಮಾರ ಶಾಂತಪ್ಪ ಅವರು ಶೇ 97.76ರಷ್ಟು ಅಂಕ ಗಳಿಸಿ ದ್ವಿತೀಯ ಸ್ಥಾನದಲ್ಲಿದ್ದಾರೆ.

ಕನ್ನಡ ಮಾಧ್ಯಮದಲ್ಲಿ ಶ್ರೇಯಾ ದತ್ತಾತ್ರೇಯ ಶೇ 96.96ರಷ್ಟು ಅಂಕ ಪಡೆದು ಪ್ರಥಮ ಸ್ಥಾನದಲ್ಲಿದ್ದರೆ, ಅಂಕಿತಾ ರೇವಣಸಿದ್ದಪ್ಪ (ಶೇ 96.16) ದ್ವಿತೀಯ ಸ್ಥಾನ ಗಳಿಸಿದ್ದಾರೆ. ಆಂಗ್ಲ ಮಾಧ್ಯಮದಲ್ಲಿ ಒಟ್ಟು 68 ಅಗ್ರಶ್ರೇಣಿ, 79 ಪ್ರಥಮ ಶ್ರೇಣಿ, 27 ದ್ವಿತೀಯ ಶ್ರೇಣಿ, 15 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಹಾಗೆಯೇ ಕನ್ನಡ ಮಾಧ್ಯಮದಲ್ಲ್ಲಿ14 ವಿದ್ಯಾರ್ಥಿಗಳು ಅಗ್ರಶ್ರೇಣಿ, 26 ಪ್ರಥಮ ಶ್ರೇಣಿ, 7 ದ್ವಿತೀಯ ಶ್ರೇಣಿ, 1 ವಿದ್ಯಾರ್ಥಿ ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಒಟ್ಟು 15 ವರ್ಷಗಳ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಶಾಲೆಯು ಈ ವರ್ಷದ ಫಲಿತಾಂಶವನ್ನೊಳಗೊಂಡು 10 ಬಾರಿ ಶೇ 100ರಷ್ಟು ಫಲಿತಾಂಶ ಪಡೆದಿದೆ. ಉತ್ತಮ ಫಲಿತಾಂಶ ಬಂದಿದ್ದಕ್ಕಾಗಿ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯಗುರುಗಳು ಮತ್ತು ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-34-112855442

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.