ಕಲಬುರಗಿ: ನಗರದ ಶರಣಬಸವೇಶ್ವರ ವಸತಿ ಪಬ್ಲಿಕ್ ಶಾಲೆಯ (ಎಸ್ಬಿಆರ್) ಇಬ್ಬರು ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ–1ರಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದು ಶಾಲೆಯ ಗೌರವ ಹೆಚ್ಚಿಸಿದ್ದಾರೆ. ಶಾಲೆಗೆ ಶೇ 98.24ರಷ್ಟು ಫಲಿತಾಂಶ ಬಂದಿದೆ.

ಮೇಘನಾ ಎಂ. ಪಾಟೀಲ ಮತ್ತು ಮಾಧವಿ ಪ್ರಭಯ್ಯ ಅವರು 625ಕ್ಕೆ 622 ಅಂಕಗಳನ್ನು (ಶೇ 99.52) ಗಳಿಸುವ ಮೂಲಕ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಸಾತ್ವಿಕ್ ಡಿ.ಪಾಟೀಲ ಶೇ 99.04, ಪ್ರಜ್ವಲ್ ಬಿ.ಪಾಟೀಲ ಶೇ 98.88, ವಿನಯ ಆರ್.ಎಸ್. ಶೇ 98.88ರಷ್ಟು ಅಂಕ ಗಳಿಸಿ ಗಣನೀಯ ಸಾಧನೆ ಮಾಡಿದ್ದಾರೆ.

61 ವಿದ್ಯಾರ್ಥಿಗಳು ಶೇ 96ಕ್ಕಿಂತ ಹೆಚ್ಚು, 21 ವಿದ್ಯಾರ್ಥಿಗಳು ಶೇ 96ರಿಂದ ಶೇ 95ರಷ್ಟು, 256 ವಿದ್ಯಾರ್ಥಿಗಳು ಶೇ 85ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ. ಕನ್ನಡದಲ್ಲಿ 49 ವಿದ್ಯಾರ್ಥಿಗಳು ಮತ್ತು ಹಿಂದಿಯಲ್ಲಿ 41 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಪಡೆದಿದ್ದಾರೆ.

ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿ ಪಾಲಕರ ಹಾಗೂ ಸಂಸ್ಥೆಯ ಕೀರ್ತಿಗೆ ಪಾತ್ರರಾದ ವಿದ್ಯಾರ್ಥಿಗಳನ್ನು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ದಾಕ್ಷಾಯಣಿ ಎಸ್.ಅಪ್ಪ, ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಅಭಿನಂದಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-34-1446150078

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.