ಕಲಬುರಗಿ: ಆಳಂದ ತಾಲ್ಲೂಕಿನ ಎನ್.ಎನ್.ತಾಂಡಾ(ಕೊರಳ್ಳಿ) ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿಜಯಲಕ್ಷ್ಮೀ ಮಲ್ಲಪ್ಪ ಗಡ್ಡದ ಅವರು ಎಸ್ಎಸ್ಎಲ್ಸಿ ಪರೀಕ್ಷೆ–1ರಲ್ಲಿ 606 (ಶೇ 96.96) ಅಂಕ ಪಡೆದು ತಾಲ್ಲೂಕಿಗೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.

ವಿದ್ಯಾ ಅಪ್ಪು ರಾಠೋಡ (ಶೇ 94.88), ಸ್ನೇಹಲ್ ಲಕ್ಷೀಪುತ್ರ (ಶೇ 92.32) ಅಂಕಗಳನ್ನು ಪಡೆದಿದ್ದಾರೆ. ವಸತಿ ಶಾಲೆಗೆ ಶೇ 100ರಷ್ಟು ಫಲಿತಾಂಶ ಬಂದಿದ್ದು, 46 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಹಾಗೂ 30 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಶಾಲೆಯ ಪ್ರಾಂಶುಪಾಲ ಪ್ರಶಾಂತ ಜಿ.ಕಡಗಂಚಿ ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-31-1875938707

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.