ಕಾರಟಗಿ: ಪಟ್ಟಣದ ನ್ಯಾಷನಲ್ ಹಾಗೂ ಗ್ರೀನ್ ವ್ಯಾಲಿ ರೂರಲ್ ಪ್ರೌಢಶಾಲೆಯ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ 3 ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ವಿತರಿಸುವ ಕಾರ್ಯಕ್ರಮ ಬುಧವಾರ ಶಾಲೆಯ ಆವರಣದಲ್ಲಿ ನಡೆಯಿತು.

617 ಅಂಕ ಗಳಿಸಿ ತಾಲ್ಲೂಕಿಗೆ ಅತಿ ಹೆಚ್ಚು ಅಂಕ ಪಡೆದ ವಿನೋದ ತಿಮ್ಮಪ್ಪ ಹಾಗೂ 597 ಅಂಕ ಪಡೆದ ಶ್ರದ್ಧಾ ಶಶಿಧರ ಪಾಟೀಲ ಮತ್ತು 595 ಅಂಕಗಳನ್ನು ಪಡೆದ ಹರ್ಷಿತಾ ಬಸವರಾಜ್ ಅವರನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕೆ. ವೆಂಕಟರಾವ್ ಸನ್ಮಾನಿಸಿ, ಪ್ರೋತ್ಸಾಹ ಧನ ವಿತರಿಸಿದರು.

ಬಳಿಕ ಮಾತನಾಡಿದ ಕೆ. ವೆಂಕಟರಾವ್, ‘ನಮ್ಮ ಶಾಲೆ ನಂ.1 ಸ್ಥಾನಕ್ಕೆ ಬರಬೇಕೆಂಬ ನಮ್ಮ ಆಸೆಯನ್ನು ಪ್ರಸ್ತುತ ಸಾಲಿನ ವಿದ್ಯಾರ್ಥಿಗಳು ಈಡೇರಿಸಿ, ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಪ್ರೋತ್ಸಾಹಧನ ನೀಡಲಾಗುತ್ತಿದೆ’ ಎಂದರು.

‘ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ ಸಮಾಜ ಸೇವಕ, ನನ್ನ ಸಹೋದರ ಕೂಚಿಪುಡಿ ರಮೇಶಬಾಬು ಅವರ ಸ್ಮರಣಾರ್ಥ ಪ್ರತಿ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಮೂವರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು’ ಎಂದು ಹೇಳಿದರು.

ಪೋಷಕರು ಹಾಗೂ ವಿದ್ಯಾರ್ಥಿಗಳು ಅನಿಸಿಕೆ ಹಂಚಿಕೊಂಡರು.

ಟ್ರಸ್ಟ್ ವತಿಯಿಂದ ಕ್ರಮವಾಗಿ ಪ್ರಥಮ ಸ್ಥಾನ ಪಡೆದ ವಿನೋದಗೆ ₹25 ಸಾವಿರ, ಶ್ರದ್ಧಾಗೆ ₹15 ಸಾವಿರ ಮತ್ತು ಹರ್ಷಿತಾಗೆ ₹10 ಸಾವಿರ ಪ್ರೋತ್ಸಾಹ ಧನದ ಚೆಕ್ಗಳನ್ನು ವಿತರಿಸಲಾಯಿತು.

ಮುಖ್ಯಗುರು ರಂಜಿತಕುಮಾರ್, ಎಚ್ಒಡಿ ಶ್ರೀನಿವಾಸ್, ಶಿಕ್ಷಕಿ ಮೋಹಿದ್ದೀನ್ಬೀ ಸಹಿತ ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-35-1025731134

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.