ಕಾರ್ಗಲ್: ಭಾರಂಗಿ ಹೋಬಳಿಯ ಕಾರ್ಗಲ್ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರವಿದ್ದು, ಇಲ್ಲಿಗೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಗಡಿ ಭಾಗದ ನಾಗವಳ್ಳಿ, ಕೋಗಾರು, ಭಾನುಕುಳಿ, ಚನ್ನಗೊಂಡ ಪ್ರದೇಶದ ವಿದ್ಯಾರ್ಥಿಗಳು ಬರುತ್ತಾರೆ.

ಇವರೂ ಸೇರಿದಂತೆ ಒಟ್ಟು 35 ವಿದ್ಯಾರ್ಥಿಗಳಿಗೆ ಜೋಗ–ಕಾರ್ಗಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಕೆ.ಸುರೇಶ್ ಅವರು ಸ್ವಂತ ಖರ್ಚಿನಿಂದ ಪ್ರತಿನಿತ್ಯ ಬಾದಾಮಿ ಹಾಲು, ಬ್ರೆಡ್ ವಿತರಿಸುತ್ತಿದ್ದಾರೆ.

‘ಹಳ್ಳಿ ಭಾಗದ ವಿದ್ಯಾರ್ಥಿಗಳ ಕಷ್ಟದ ಅರಿವು ಇದೆ. ಹೀಗಾಗಿ ಈ ಕೆಲಸಕ್ಕೆ ಮುಂದಾಗಿದ್ದು, ಸರ್ಕಾರಿ ಸೇವೆಯ ಜೊತೆಗೆ ಸಾಮಾಜಿಕವಾಗಿ ತೊಡಗಿಕೊಳ್ಳಲು ಇದೊಂದು ಅವಕಾಶವಾಗಿದೆ. ಈ ಕಾರ್ಯಕ್ಕೆ ವಾಹನ ಚಾಲಕ ಬಸವರಾಜ್ ಕೂಡ ಕೈಜೋಡಿಸಿದ್ದಾರೆ’ ಎಂದು ಎಂ.ಕೆ. ಸುರೇಶ್ ತಿಳಿಸಿದರು.

ಮುಂದಿನ ದಿನಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಕಾರ ಬೆಳಗಿನ ಉಪಾಹಾರದ ವ್ಯವಸ್ಥೆ ಮಾಡಬೇಕು ಎಂದು ಪೋಷಕರು ಆಗ್ರಹಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-42-1560282687

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.