ಸೊರಬ: ‘ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ತರಲಾಗಿದೆ. ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 94ರಷ್ಟು ಫಲಿತಾಂಶ ದಾಖಲಾಗಿದ್ದು, ಹೊಸ ಇತಿಹಾಸ ನಿರ್ಮಾಣವಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ತಾಲ್ಲೂಕಿನ ಬಂದಿಗೆ ಗ್ರಾಮದ ಕೇಸಕ್ಕಿ ತಿಮ್ಮಪ್ಪ, ಮಹಿಷಾಸುರ ಮರ್ದಿನಿ ಹಾಗೂ ಪರಿವಾರ ದೇವರುಗಳ ಪುನರ್ ಪ್ರತಿಷ್ಠಾಪನಾ ಮಹೋತ್ಸವ ನೆರವೇರಿಸಿ ಮಾತನಾಡಿದರು.

‘ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ, ದೀನ–ದಲಿತರ ಮನೆ– ಮನ ತಲುಪಿಸಿದ್ದು, ನುಡಿದಂತೆ ನಡೆದುಕೊಂಡಿದೆ. ಸರ್ಕಾರದ ನಿರಂತರ ಶ್ರಮ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದ ದೊಡ್ಡ ಯಶಸ್ಸು ಸಿಕ್ಕಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ 94ರಷ್ಟು ಫಲಿತಾಂಶ ಬಂದಿರುವುದು ಹೆಮ್ಮೆಯ ವಿಷಯ. ಇಲಾಖೆಯಲ್ಲಿ ಸುಧಾರಣೆ ತಂದಿರುವುದಕ್ಕೆ ಇದು ನಿದರ್ಶನ’ ಎಂದು ತಿಳಿಸಿದರು.

‘ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪೋಷಕರ ಜೊತೆ ಸರ್ಕಾರವೂ ಕೈಜೋಡಿಸಿ ಗುಣಮಟ್ಟದ ಶಿಕ್ಷಣ ನೀಡುತ್ತಿದೆ. ಈಗಾಗಲೇ 15,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ರಾಜ್ಯದ ಕೆಪಿಎಸ್ ಶಾಲೆಗಳನ್ನು ಮೇಲ್ದರ್ಜೆಗೇರಿಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸುವ ಚಿಂತನೆ ಇದೆ’ ಎಂದರು.

ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ದುರ್ಗಪ್ಪ ಬಿ.ಕೆ. ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಗಣಪತಿ ಹುಲ್ತಿಕೊಪ್ಪ, ಬಗರ್ ಹುಕುಂ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಡಿ. ಶೇಖರ್, ಗುತ್ಯಪ್ಪ, ಷಣ್ಮುಖಪ್ಪ, ಗಣಪತಪ್ಪ, ನಾಗರತ್ನ, ರಾಜೇಶ್ವರಿ, ಸತ್ಯಪ್ಪ, ಸುಬ್ಬಣ್ಣ, ಕೆರೆಸ್ವಾಮಿ ಗೌಡ, ವೀರಭದ್ರಪ್ಪ, ವಿನಾಯಕ, ಉಮೇಶ್, ರಮೇಶ್, ದಿನೇಶ್, ಅರುಣ್, ಸಣ್ಣಪ್ಪ ಸೇರಿ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-42-1656938608

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.